More

    ಸ್ಥಳೀಯ ಸಮಸ್ಯೆ ಅರಿಯದ ಕಾಂಗ್ರೆಸ್

    ಗಂಗಾವತಿ: ಶೈಕ್ಷಣಿಕ ಮತ್ತು ಪದವೀಧರ ಸಮಸ್ಯೆಗಳ ಪರಿಹಾರಕ್ಕೆ ಬಿಜೆಪಿ ಬೆಂಬಲಿಸಬೇಕಿದ್ದು, ಮೇಲ್ಮನೆಯಲ್ಲಿ ಚರ್ಚಿಸಲು ಅವಕಾಶ ನೀಡುವಂತೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಮನವಿ ಮಾಡಿದರು.

    ನಗರದ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಉಪನ್ಯಾಸಕರ ಸಭೆಯಲ್ಲಿ ಮಾತನಾಡಿದರು. ಕಳೆದ ಬಾರಿ ಕಾಂಗ್ರೆಸ್‌ನಿಂದ ಗೆದ್ದ ಎಂಎಲ್ಸಿ ಕೊಪ್ಪಳ ಜಿಲ್ಲೆಗೆ ಒಂದು ಬಾರಿಯೂ ಭೇಟಿ ನೀಡಿಲ್ಲ. ಸ್ಥಳೀಯ ಸಮಸ್ಯೆಗಳ ನಿವಾರಣೆಯತ್ತ ಗಮನಹರಿಸಿಲ್ಲ. ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಕಳಕಳಿ ವ್ಯಕ್ತಿಯಾಗಿದ್ದು, ಕ್ಷೇತ್ರ ವ್ಯಾಪ್ತಿ ಎಲ್ಲ ಜಿಲ್ಲೆಗಳಿಗೆ ಸಂಚರಿಸಿ ಪದವೀಧರರ ಸಮಸ್ಯೆ ಅರಿತಿದ್ದಾರೆ ಎಂದರು.

    ಕಾಲೇಜಿನ ಆಡಳಿತಾಧಿಕಾರಿ ಬಸವರಾಜ ಸವಡಿ, ವೈದ್ಯರಾದ ಡಾ.ಎಸ್.ಬಿ.ಹಂದ್ರಾಳ್, ಡಾ.ವೀರನಗೌಡ, ಡಾ.ಈಶ್ವರ ಸವಡಿ, ಡಾ.ಎ.ಜೀಡಿ, ಬಿಜೆಪಿ ಮುಖಂಡ ಜಿ.ಶ್ರೀಧರ್ ಇತರರಿದ್ದರು.

    ಎಸ್‌ಕೆಎನ್‌ಜಿ ಕಾಲೇಜಿಗೆ ಭೇಟಿ: ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಶಾಸಕ ಗಾಲಿ ಜನಾರ್ದನರೆಡ್ಡಿ ಉಪನ್ಯಾಸಕರಲ್ಲಿ ಮತಯಾಚಿಸಿದರು. ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರಲ್ಲದೇ, ಪರಿಹಾರ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚಿಸುವ ಭರವಸೆ ನೀಡಿದರು. ಬಿಜೆಪಿ ಮುಖಂಡರಾದ ಮನೋಹರಗೌಡ ಹೇರೂರು, ವೀರೇಶ ಬಲ್ಕುಂದಿ, ಪಂಪಣ್ಣನಾಯಕ ಇತರರಿದ್ದರು.

    ವಕೀಲರ ಬೇಡಿಕೆ ಆಲಿಸಿದ ರೆಡ್ಡಿ

    ಎಂಎಲ್ಸಿ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಕೀಲರ ಸಂಘದ ಕಚೇರಿಯಲ್ಲಿ ಬಿಜೆಪಿಯಿಂದ ವಿಶೇಷ ಸಭೆ ಶನಿವಾರ ಹಮ್ಮಿಕೊಳ್ಳಲಾಗಿತ್ತು. ವಕೀಲರ ಬೇಡಿಕೆ ಮತ್ತು ಸಮಸ್ಯೆಗಳನ್ನು ಆಲಿಸಿ ಶಾಸಕ ಗಾಲಿ ಜನಾರ್ದನರೆಡ್ಡಿ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್‌ರನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಮಾಜಿ ಶಾಸಕ ಪರಣ್ಣಮುನವಳ್ಳಿ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ವಕೀಲರ ಸಂಘದ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ಬಿಜೆಪಿ ಮುಖಂಡರಾದ ಚನ್ನಪ್ಪ ಮಳಗಿ, ಎಚ್.ಸಿ.ಯಾದವ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts