More

    ಪಿಂಚಣಿ ಗೊಂದಲ ನಿವಾರಣೆಗೆ ಪ್ರಯತ್ನ: ಶಾಸಕ ಪರಣ್ಣ ಮುನವಳ್ಳಿ ಭರವಸೆ

    ಗಂಗಾವತಿ: ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿದ್ದು, ಪಿಂಚಣಿ ಗೊಂದಲ ನಿವಾರಣೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

    ಶಿಕ್ಷಕರ ದಿನಾಚರಣೆ ನಿಮಿತ್ತ ನಗರದ ಇಲಾಹಿ ಕಾಲನಿಯ ಟಿಎಂಎಇ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶನಿವಾರ ಏರ್ಪಡಿಸಿದ್ದ ಗಂಗಾವತಿ, ಕನಕಗಿರಿ ಮತ್ತು ಕಾರಟಗಿ ತಾಲೂಕು ಮಟ್ಟದ ಶಿಕ್ಷಕರ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಅನುದಾನ ಮೀಸಲಿರಿಸಿದೆ. ಅನುದಾನಿತ ಶಿಕ್ಷಕರ ಬೇಡಿಕೆ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

    ಸಾನ್ನಿಧ್ಯವಹಿಸಿದ್ದ ಕಲ್ಲುಮಠದ ಡಾ.ಕೊಟ್ಟೂರು ಸ್ವಾಮೀಜಿ ಮಾತನಾಡಿ, ಬ್ರಿಟಿಷರ ಕಾಲದಿಂದಲೂ ಮಠಗಳು ಶಿಕ್ಷಣಕ್ಕೆ ಆದ್ಯತೆ ನೀಡಿದ್ದು, ಮೌಲ್ಯಧಾರಿತ ಶಿಕ್ಷಣಕ್ಕೆ ಶ್ರಮಿಸಬೇಕಿದೆ ಎಂದರು. ಬಿಇಡಿ ಕಾಲೇಜು ಪ್ರಾಚಾರ್ಯ ಡಾ.ಕೆ.ಸಿ.ಕುಲ್ಕರ್ಣಿ ಉಪನ್ಯಾಸ ನೀಡಿದರು. ಜಿಲ್ಲಾ ಮತ್ತು ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು, ನಿವೃತ್ತ ಶಿಕ್ಷಕರು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಾಲೂಕು ಗೌರವಾಧ್ಯಕ್ಷ ಪ್ರಕಾಶ ಗೌಡ ಪಾಟೀಲ್, ಅಧ್ಯಕ್ಷ ನಿಂಗಪ್ಪ ಗುಂಡೂರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಚಾಂದ್‌ಪಾಷಾ, ಪ್ರಮುಖರಾದ ಡಾ.ಎಚ್.ಎನ್.ಶಿರಿಗೇರಿ, ಕಲ್ಯಾಣಂ ಜಾನಕೀರಾಂ, ಶರಣೇಗೌಡ ಮಾಲಿಪಾಟೀಲ್, ಅನಿಲ್‌ಕುಮಾರ, ಕೊಮಾರೆಪ್ಪ, ಎಂ.ಎಚ್.ಸಿದ್ಧೀಕ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts