More

    ಕನ್ನಡ ನಾಡೆಂದು ಮರುನಾಮಕರಣ ಮಾಡಿ, ಸರ್ವಾಂಗೀಣ ಜಿಲ್ಲಾಭಿವೃದ್ಧಿ ಹೋರಾಟ ಸಮಿತಿ ಮನವಿ

    ಗಂಗಾವತಿ: ಕರ್ನಾಟಕವನ್ನು ಕನ್ನಡ ನಾಡೆಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ಸರ್ವಾಂಗೀಣ ಜಿಲ್ಲಾಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಬುಧವಾರ ಮನವಿ ಸಲ್ಲಿಸಿದರು.

    ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ, ರಾಜ್ಯ ಪುನರ್ ವಿಂಗಡಣಾ ಕಾಯ್ದೆ ಜಾರಿ ಪ್ರಕಾರ ದೇಶದಲ್ಲಿ ಅನೇಕ ರಾಜ್ಯಗಳು ಅಸ್ತಿತ್ವಕ್ಕೆ ಬಂದಿದ್ದು, ಅದರಂತೆ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ೋಷಿಸಲಾಯಿತು.

    ಕರ್ನಾಟಕ ರಾಜ್ಯ ಎಂಬುದರ ಬದಲಾಗಿ ಕನ್ನಡ ನಾಡು ಎಂದು ಮರುನಾಮಕರಣ ಮಾಡಿದರೆ, ಕನ್ನಡ ಭಾಷೆಯ ಮೇಲಿನ ಅಭಿಮಾನ ಹೆಚ್ಚಾಗಲಿದ್ದು, ಭಾಷೆಗಳ ಆಧಾರದ ಮೇಲೆ ರಾಜ್ಯಗಳ ಹೆಸರು ನಾಮಕರಣ ಮಾಡಿದಂತಾಗುವುದು ಎಂದರು.

    ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕ ಭಾಗವು ಶೈಕ್ಷಣಿಕ ಹಾಗೂ ಸರ್ಕಾರಿ ಹುದ್ದೆಗಳಲ್ಲಿ ಹಿಂದುಳಿದಿರುವುದನ್ನು ಪರಿಗಣಿಸಿ 371ಜೆ ವಿಧೇಯಕ ಜಾರಿಗೆ ತಂದಿದ್ದು, ಐಎಎಸ್, ಐಪಿಎಸ್ ಸೇರಿ ಕೇಂದ್ರ ಸರ್ಕಾರದ ಪ್ರಮುಖ ಹುದ್ದೆಗಳಿಗೆ ರಾಜ್ಯದವರನ್ನು ಪರಿಗಣಿಸುತ್ತಿಲ್ಲ. ಈ ಭಾಗದವರಿಗೆ ಕೇಂದ್ರ ಸರ್ಕಾರ ನಡೆಸುವ ಹುದ್ದೆಗಳಿಗೆ ಮೀಸಲು ನಿಗದಿ ಮಾಡಲು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕಿದೆ.

    ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯ ಒದಗಿಸುವುದರ ಮೂಲಕ ಸಬಲೀಕರಣಗೊಳಿಸುವಂತೆ ಒತ್ತಾಯಿಸಿದರು. ಪದಾಧಿಕಾರಿಗಳಾದ
    ಜಡಿಯಪ್ಪ ಹಂಚಿನಾಳ, ಕಷ್ಣ ಮೆಟ್ರಿ, ದುರುಗೇಶ ಹೊಸಳ್ಳಿ, ಆಂಜನೇಯ, ಚಂದ್ರಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts