More

    ಅಂಜನಾದ್ರಿಗೆ ನಾಳೆ ಬಸವರಾಜ ಬೊಮ್ಮಾಯಿ: ಹೆಲಿಪ್ಯಾಡ್, ತಾತ್ಕಾಲಿಕ ವ್ಯವಸ್ಥೆ ಪರಿಶೀಲನೆ

    ಗಂಗಾವತಿ: ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಬಗ್ಗೆ ಹೆಚ್ಚು ಆಸಕ್ತಿವಹಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆ.1ರಂದು ಖುದ್ದು ಭೇಟಿ ನೀಡುತ್ತಿದ್ದಾರೆ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.

    ಅಂಜನಾದ್ರಿಗೆ ಸಿಎಂ ಭೇಟಿ ಕಾರಣ ತಾಲೂಕಿನ ಆನೆಗೊಂದಿಯಲ್ಲಿ ನಿರ್ಮಿಸುತ್ತಿರುವ ಹೆಲಿಪ್ಯಾಡ್ ಮತ್ತು ತಾತ್ಕಾಲಿಕ ವ್ಯವಸ್ಥೆಯನ್ನು ಶನಿವಾರ ವೀಕ್ಷಿಸಿ ಮಾತನಾಡಿದರು. ಬೆಟ್ಟದ ಕೆಳಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಹೆಲಿಪ್ಯಾಡ್ ಬಳಿ ನಿರ್ಮಿಸಿರುವ ವಿಶ್ರಾಂತಿ ಶೆಡ್‌ನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಪ್ರವಾಸೋದ್ಯಮ ಪೂರಕ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಈಗಾಗಲೇ ಮನವಿ ಮಾಡಿದ್ದು, ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

    ಅಂಜನಾದ್ರಿ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಆಸಕ್ತಿವಹಿಸಿದ್ದು, ಮೊದಲ ಹಂತದಲ್ಲಿ 220 ಕೋಟಿ ರೂ. ಅನುದಾನದ ಯೋಜನೆ ರೂಪಿಸಲಾಗಿದೆ. ಹುಲಿಗಿ ಹೆದ್ದಾರಿಯಿಂದ ನಗರದ ಸಾಯಿ ಮಂದಿರದವರೆಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಪಿಡಬ್ಲುೃಡಿಯಿಂದ 352 ಕೋಟಿ ರೂ. ಮಂಜೂರಾಗಿದ್ದು, ಡಿಪಿಆರ್ ಸಿದ್ಧಪಡಿಸಲಾಗಿದೆ. ಸ್ಮಾರಕ ಮತ್ತು ನೈಸರ್ಗಿಕ ಸಂಪತ್ತಿಗೆ ತೊಂದರೆಯಾಗದಂತೆ ರಸ್ತೆ ನಿರ್ಮಿಸಲಾಗುವುದು ಎಂದರು.

    ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಮಾತನಾಡಿ, ಅಂಜನಾದ್ರಿ ಅಭಿವೃದ್ಧಿ ಪೂರಕವಾದ ಕಾಮಗಾರಿಗಳಿಗೆ 60 ಎಕರೆ ಭೂಮಿ ಗುರುತಿಸಲಾಗಿದೆ. ಭೂಸ್ವಾಧೀನಕ್ಕಾಗಿ ರೈತರ ಜತೆ ಚರ್ಚಿಸಿದ್ದು, ಸರ್ಕಾರ ನಿಗದಿಪಡಿಸಿದ ದರಕ್ಕೆ ಭೂಮಿ ನೀಡುವಂತೆ ತಿಳಿಸಲಾಗಿದೆ. ಸಿಎಂ ಭೇಟಿ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು. ಎಸ್ಪಿ ಅರುಣಾಂಗ್ಷು ಗಿರಿ, ಎಡಿಸಿ ಮಾರುತಿ, ಎಸಿ ಬಸವಣ್ಣೆಪ್ಪ ಕಲ್ಲಶೆಟ್ಟಿ, ಡಿವೈಎಸ್ಪಿ ಆರ್.ಎಸ್.ಉಜ್ಜನಕೊಪ್ಪ, ತಹಸೀಲ್ದಾರ್ ಯು.ನಾಗರಾಜ್, ಪಿಡಬ್ಲುೃಡಿ ಇಇ ರಾಜಶೇಖರ್ ಕಡಿವಾಳ, ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಕೆ.ಶಶಿಧರ, ಎಇ ನಾಗರಾಜ್, ಗ್ರಾಮೀಣ ಪಿಐ ಎಸ್. ಮಂಜುನಾಥ, ಆರ್‌ಐ ಮಂಜುನಾಥ ಹಿರೇಮಠ ಇತರರಿದ್ದರು.

    ಸಚಿವರಾದ ಸುಧಾಕರ್, ಬೈರತಿ ಆಗಮನ:

    ಕೊಪ್ಪಳ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಆ.1ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11ಕ್ಕೆ ದಾವಣಗೆರೆಯಿಂದ ಗಂಗಾವತಿ ತಾಲೂಕು ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವರು. ಸಿಎಂ ನೇತೃತ್ವದಲ್ಲಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಸಂಬಂಧಿಸಿದ ಸಭೆಯಲ್ಲಿ ಭಾಗಿಯಾಗುವರು. ಬಳಿಕ ಕೊಪ್ಪಳಕ್ಕೆ ಆಗಮಿಸಿ ತಾಯಿ ಮಕ್ಕಳ 100 ಹಾಸಿಗೆ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts