More

    ಕಾರ್ಮಿಕ ವಿರೋಧಿ ಯೋಜನೆಗಳು ಮಾರಕ: ಸಿಐಟಿಯು ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಅನಿಸಿಕೆ

    ಗಂಗಾವತಿ: ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರ, ಕಾರ್ಪೋರೇಟ್ ಕಂಪನಿಗಳ ಪರವಾಗಿವೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಆರೋಪಿಸಿದರು.

    ನಗರದ ವಿಜಯನಗರ ಕಾಲನಿಯ ಸಿಐಟಿಯು ಕಚೇರಿ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕು ಮಟ್ಟದ ಸಭೆ ಉದ್ಘಾಟಿಸಿ ಮಾತನಾಡಿದರು. ಜನ ಮತ್ತು ಕಾರ್ಮಿಕರ ಪರ ಆಡಳಿತ ನಡೆಸುವುದಾಗಿ ಅಧಿಕಾರ ಹಿಡಿದ ಬಿಜೆಪಿ, 8 ವರ್ಷಗಳಲ್ಲಿ ಕಾರ್ಮಿಕ ವಿರೋಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಾಗುತ್ತಿದ್ದು, ಭದ್ರತೆ ಇಲ್ಲದಂತಾಗಿದೆ. ಕಾರ್ಮಿಕರ ಪರವಾದ ಯೋಜನೆಗಳು ಸಮರ್ಪಕ ಅನುಷ್ಠಾನಗೊಳ್ಳುತ್ತಿಲ್ಲ. ಕೃಷಿ, ಕಾರ್ಮಿಕ ಮತ್ತು ರೈತ ವಿರೋಧಿ ನೀತಿಯಿಂದ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ ಎಂದರು.

    ಫೆಡರೇಷನ್ ತಾಲೂಕು ಅಧ್ಯಕ್ಷ ಮುತ್ತಣ್ಣ ಮಾತನಾಡಿ, ಕಾರ್ಮಿಕರಿಗೆ ಕನಿಷ್ಠ ವೇತನ, ಪಿಂಚಣಿ, ವಿಮೆ ಮತ್ತು ಆರೋಗ್ಯ ರಕ್ಷಣೆ ಯೋಜನೆಗಳಿಗಾಗಿ ಸಂಘಟಿತ ಹೋರಾಟದ ಅಗತ್ಯವಿದೆ ಎಂದರು. ಸಿಐಟಿಯು ತಾಲೂಕು ಅಧ್ಯಕ್ಷ ನಾಗೇಶ ನಾಯಕ, ಸದಸ್ಯ ಕೃಷ್ಣಪ್ಪ, ಫೆಡರೇಷನ್‌ನ ತಾಲೂಕು ಕಾರ್ಯದರ್ಶಿ ಮಂಜುನಾಥ ಡಗ್ಗಿ, ಖಜಾಂಚಿ ಮಹಾದೇವ ಗೌಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts