More

    ರಸಗೊಬ್ಬರ ಅಕ್ರಮ ದಾಸ್ತಾನು ಪತ್ತೆ ಹಚ್ಚಿ: ಗಂಗಾವತಿಯಲ್ಲಿ ಪ್ರಾಂತ ರೈತ ಸಂಘ, ಸಿಪಿಐಎಂ ಪ್ರತಿಭಟನೆ

    ಗಂಗಾವತಿ: ಸಮರ್ಪಕವಾಗಿ ರಸಗೊಬ್ಬರ ಪೂರೈಸಬೇಕೆಂದು ಒತ್ತಾಯಿಸಿ ಪ್ರಾಂತ ರೈತ ಸಂಘ, ಸಿಪಿಐಎಂ ತಾಲೂಕು ಸಮಿತಿ ನಗರದ ಕೃಷಿ ಇಲಾಖೆ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದವು.

    ಸಂಘದ ತಾಲೂಕು ಕಾರ್ಯದರ್ಶಿ ಶ್ರೀನಿವಾಸ ಹೊಸಳ್ಳಿ ಮಾತನಾಡಿ, ಕೃಷಿ ಚಟುವಟಿಕೆ ಶುರುವಾಗಿದ್ದು, ರೈತರಿಗೆ ರಸಗೊಬ್ಬರ ಬೇಡಿಕೆಯಂತೆ ಪೂರೈಕೆಯಾಗುತ್ತಿಲ್ಲ. ನಕಲಿ ರಸಗೊಬ್ಬರ ಮಾರಾಟದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಕ್ರಮ ದಾಸ್ತಾನು ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ರಸಗೊಬ್ಬರ ಮತ್ತು ಕ್ರಿಮಿನಾಶಕ ಬೆಲೆ ನಿಯಂತ್ರಿಸುವಂತೆ ಒತ್ತಾಯಿಸಿದರು. ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲಗೆ ಮನವಿ ಸಲ್ಲಿಸಲಾಯಿತು.

    ಬಿಎಸ್‌ಪಿ ಪ್ರತಿಭಟನೆ: ನಕಲಿ ರಸಗೊಬ್ಬರ ಪೂರೈಕೆ ಜಾಲ ಪತ್ತೆ ಹಚ್ಚುವಂತೆ ಆಗ್ರಹಿಸಿ ಬಹುಜನ ಸಮಾಜ ಪಕ್ಷದ ತಾಲೂಕು ಸಮಿತಿ ಸದಸ್ಯರು ನಗರದ ತಾಲೂಕು ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಿ, ಶಿರಸ್ತೇದಾರ್ ಅನಂತ ಜೋಶಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಸಿದ್ದಾಪುರ ಮಾತನಾಡಿ,ಇತ್ತೀಚಿಗೆ ತಾಲೂಕಿನಲ್ಲಿ ರಸಗೊಬ್ಬರ ಮಾರಾಟಗಾರರ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ನಕಲಿ ರಸಗೊಬ್ಬರ ತಯಾರಿಕೆ ಕಾರಣವಾಗಿದ್ದು, ಮರಳು ಸೇರಿ ಅನುಪಯುಕ್ತ ವಸ್ತುಗಳನ್ನು ಗೊಬ್ಬರದಲ್ಲಿ ಮಿಶ್ರಣ ಮಾಡಲಾಗುತ್ತಿದೆ. ರೈತರನ್ನು ಶೋಷಿಸುತ್ತಿರುವ ನಕಲಿ ಗೊಬ್ಬರ ಪೂರೈಕೆ ಜಾಲವನ್ನು ಪತ್ತೆ ಹಚ್ಚಿ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts