More

    ಮನೆ ನಿರ್ಮಾಣಕ್ಕೆ ಸಹಾಯಧನ ನೀಡಿ: ರಾಜ್ಯ ಕಟ್ಟಡ ಕಟ್ಟುವ-ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಪ್ರತಿಭಟನೆ

    ಗಂಗಾವತಿ: ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಹಾಯಧನ ನೀಡುವಂತೆ ಒತ್ತಾಯಿಸಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ತಾಲೂಕು ಸಮಿತಿ ಸೋಮವಾರ ಎಐಟಿಯುಸಿ ನೇತೃತ್ವದಲ್ಲಿ ಸಿಬಿಎಸ್ ವೃತ್ತದಿಂದ ಕೃಷ್ಣದೇವರಾಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

    ಜಿಲ್ಲಾ ಕಾರ್ಯದರ್ಶಿ ಎ.ಎಲ್.ತಿಮ್ಮಣ್ಣ ಮಾತನಾಡಿ, ಕಾರ್ಮಿಕರಿಗೆ ಕನಿಷ್ಠ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ವಿಲವಾಗಿದ್ದು, ಇಲಾಖೆ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸುತ್ತಿಲ್ಲ. ವಸತಿ ಯೋಜನೆಯಡಿ ಸಹಾಯಧನ ವಿತರಣೆಗಾಗಿ ಹೋರಾಟ ಮಾಡಿದರೂ ಸ್ಪಂದಿಸಿಲ್ಲ. ಕೋವಿಡ್ ಸಂದರ್ಭ ಕಿಟ್ ಖರೀದಿಯಲ್ಲಿ ಅವ್ಯವಹಾರವಾಗಿದ್ದು, ನ್ಯಾಯಾಂಗ ತನಿಖೆ ನಡೆಸಬೇಕು. ಸೇವಾಸಿಂಧು ತಂತ್ರಾಂಶ ಬಲಗೊಳಿಸಬೇಕಿದ್ದು, ಬೋಗಸ್ ಕಾರ್ಡ್‌ಗಳಿಗೆ ಕಡಿವಾಣ ಹಾಕಬೇಕು. ಇಲಾಖೆ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದರು. ಪದಾಧಿಕಾರಿಗಳಾದ ಎ.ಹುಲುಗಪ್ಪ, ನಾಗೇಶ ಸಂಗನಾಳ್, ಬಸವರಾಜ ಜಂಗಮರಕಲ್ಗುಡಿ, ಕಾಸಿಂಸಾಬ್, ಲಕ್ಷ್ಮಣನಾಯಕ, ಶಂಕ್ರಪ್ಪ, ಶೇಖಮ್ಮ, ಗಂಗಮ್ಮ, ಮುತ್ತಣ್ಣ, ಎಸ್.ಕನಕರಾಯ, ಕಂಠೆಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts