ಗಂಗಾವತಿ: ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸದಸ್ಯರು ನಗರದಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಬುಧವಾರ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಮಾತನಾಡಿ, ನಗರ ಮತ್ತು ಗ್ರಾಮೀಣ ಭಾಗದಲ್ಲಿ ಮದ್ಯ ಮಾರಾಟ ಹೆಚ್ಚುತ್ತಿದೆ. ಪಾನಶಾಪ್, ಕಿರಾಣಿ ಅಂಗಡಿಗಳಲ್ಲಿ ಬೆಳಗ್ಗೆ 6 ಗಂಟೆಗೆ ಆರಂಭವಾಗಿ ಮಧ್ಯರಾತ್ರಿಯವರಿಗೂ ಮಾರಾಟ ಮಾಡಲಾಗುತ್ತಿದೆ. ಅಬಕಾರಿ ನಿಯಮಾವಳಿ ಉಲ್ಲಂಸುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ವಿಲವಾಗಿದ್ದಾರೆ. ಕಾರ್ಮಿಕರು, ಬಡವರು ಮತ್ತು ಯುವಕರು ಮದ್ಯದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಗುಂಡಮ್ಮಕ್ಯಾಂಪ್, ಮುರಾಹರಿನಗರ, ಲಕ್ಷ್ಮೀಕ್ಯಾಂಪ್, ಗಾಂಧಿನಗರಗಳಲ್ಲಿ ಮಿತಿ ಮೀರಿದೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪದಾಧಿಕಾರಿಗಳಾದ ಬಸವರಾಜ, ಹನುಮಂತ, ರಾಜು, ಪುಂಡಲೀಕ, ಉಮೇಶ ಇತರರಿದ್ದರು.