ಗಂಗಾವತಿ: ನಗರದ ಸೌಂದರೀಕರಣಕ್ಕೆ ಪೂರಕವಾದ ಅಭಿವೃದ್ಧಿ ಕಾಮಗಾರಿಗಳನ್ನು ಹಂತಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ವಿವಿಧ ಇಲಾಖೆ ಅನುದಾನ ಕ್ರೋಢೀಕರಿಸಲಾಗುತ್ತಿದೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.
ನಗರದ ಕನಕದಾಸ ವೃತ್ತದ ಬಳಿ 2 ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಕೆಕೆಆರ್‌ಡಿಬಿ ಅನುದಾನದಡಿಯಲ್ಲಿ ಶ್ರೀನೀಲಕಂಠೇಶ್ವರ ದೇವಾಲಯದಿಂದ ಕನಕದಾಸ ವೃತ್ತದವರಿಗೂ ರಸ್ತೆ ಅಭಿವೃದ್ಧಿ, ಬೀದಿ ದೀಪ ಅಳವಡಿಕೆ, ಡಿವೈಡರ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. 77.30ಲಕ್ಷ ರೂ.ವೆಚ್ಚದಲ್ಲಿ ಚರಂಡಿ ಕಾಮಗಾರಿ ನಿರ್ವಹಿಸಲಾಗುವುದು ಎಂದರು.
ಗುಣಮಟ್ಟದ ಕಾಮಗಾರಿ ಜತೆಗೆ ಕಾಲಮಿತಿ ಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕಿದ್ದು, ದೂರುಗಳ ಬಾರದಂತೆ ಗುತ್ತಿಗೆದಾರರು ಎಚ್ಚರಿಕೆ ವಹಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ನಿಗಾವಹಿಸುವಂತೆ ಸಲಹೆ ನೀಡಿದರು.
ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಎಂಎಲ್ಸಿ ಕರಿಯಣ್ಣ ಸಂಗಟಿ, ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್, ಉಪಾಧ್ಯಕ್ಷೆ ಪಾರ್ವತೆಮ್ಮ ದುರುಗೇಶ ದೊಡ್ಮನಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಚೌಡ್ಕಿ, ಸದಸ್ಯರಾದ ಅಜಯ್ ಬಿಚ್ಚಾಲಿ, ಪರಶುರಾಂ ಮಡ್ಡೇರ್, ಮುಖಂಡರಾದ ಮನೋಹರಗೌಡ ಹೇರೂರು, ಡಿ.ಕೆ.ಆಗೋಲಿ, ವೀರೇಶ ಬಲ್ಕುಂದಿ, ಯಮನೂರ ಚೌಡ್ಕಿ, ರಮೇಶ ಹೊಸ್ಮಲಿ ಇತರರಿದ್ದರು.
ಗಂಗಾವತಿ ನಗರದ ರಸ್ತೆ ಅಭಿವೃದ್ಧಿಗಾಗಿ ಕನಕದಾಸ ವೃತ್ತದ ಬಳಿ ಶಾಸಕ ಗಾಲಿ ಜನಾರ್ದನರೆಡ್ಡಿ ಭೂಮಿ ಪೂಜೆ ಬುಧವಾರ ನೆರವೇರಿಸಿದರು. ಮಾಜಿ ಸಚಿವ ಎಂ.ಮಲ್ಲಿಕಾರ್ಜುನನಾಗಪ್ಪ, ಮಾಜಿ ಎಂಎಲ್ಸಿ ಕರಿಯಣ್ಣ ಸಂಗಟಿ, ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್ ಇತರರಿದ್ದರು.