18 C
Bangalore
Friday, December 6, 2019

ಸ್ಮಾರಕಗಳ ರಕ್ಷಣೆಗೆ ಆದ್ಯತೆ – ಶಾಸಕ ಪರಣ್ಣ ಮುನವಳ್ಳಿ ಹೇಳಿಕೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಗಂಗಾವತಿ: ಕ್ಷೇತ್ರ ವ್ಯಾಪ್ತಿಯ ಸ್ಮಾರಕಗಳ ರಕ್ಷಣೆಗೆ ವಿಶೇಷ ಯೋಜನೆ ರೂಪಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ತಾಲೂಕಿನ ಆನೆಗೊಂದಿಯ ಐತಿಹಾಸಿಕ ಪ್ರಸಿದ್ಧ ನವವೃಂದಾವನಗಡ್ಡಿಗೆ ಶುಕ್ರವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಗಡ್ಡಿಯಲ್ಲಿ ವೃಂದಾವನ ಧ್ವಂಸ ಪ್ರಕರಣ ಸಂದರ್ಭದಲ್ಲಿ ಬೆಂಗಳೂರಿನಲ್ಲಿದ್ದರಿಂದ ಭೇಟಿ ಕೊಡಲಾಗಿಲ್ಲ. ಆದರೂ ಇಲ್ಲಿನ ಕ್ಷಣಕ್ಷಣದ ಮಾಹಿತಿಯನ್ನು ಸ್ಥಳೀಯ ಮುಖಂಡರೊಂದಿಗೆ ಪಡೆದುಕೊಂಡಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಗಡ್ಡಿಯಲ್ಲಿ ಶಾಶ್ವತ ಭದ್ರತೆಗಾಗಿ ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿನ ಸ್ಮಾರಕಗಳ ರಕ್ಷಣೆಗೆ ಆದ್ಯತೆ ನೀಡಲಾಗುವುದು. ಐತಿಹಾಸಿಕ ಹಿನ್ನೆಲೆ ಸ್ಥಳಗಳು ಪರಂಪರೆ ಬಿಂಬಿಸುತ್ತಿದ್ದು, ಇಂತಹ ಸ್ಮಾರಕಗಳ ರಕ್ಷಣೆಗೆ ಸಂಬಂಧಪಟ್ಟ ಇಲಾಖೆಗಳು ಗಂಭೀರವಾಗಿ ಪರಿಗಣಿಸಬೇಕು. ಆನೆಗೊಂದಿ ಭಾಗದ ಅಭಿವೃದ್ಧಿಗಾಗಿ ಹಂಪಿ ಪ್ರಾಧಿಕಾರಕ್ಕೂ ಪತ್ರ ಬರೆಯಲಾಗುವುದು ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ಎಂ.ತಿಪ್ಪೇರುದ್ರಸ್ವಾಮಿ ಮಾತನಾಡಿ, ಯತಿಗಳಿರುವ ಗಡ್ಡಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಒದಗಿಸಬೇಕಿದೆ. ನಿತ್ಯ ಅನ್ನ ಸಂತರ್ಪಣೆ ಜತೆಗೆ ಯಾತ್ರಿ ನಿವಾಸ ನಿರ್ಮಾಣಕ್ಕೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ಇದೇ ವೇಳೆ ಆನೆಗೊಂದಿಯಲ್ಲಿರುವ ಶಿಥಿಲಗೊಂಡ ಅತ್ಯಂತ ಹಳೆಯದಾದ ಸ.ಹಿ.ಪ್ರಾ.ಶಾಲೆ ಕಟ್ಟಡ ವೀಕ್ಷಿಸಿದರಲ್ಲದೆ, ಜಿಲ್ಲಾಡಳಿತ ನಿರ್ಮಿಸಲು ಉದ್ದೇಶಿಸಿರುವ ಶೌಚಗೃಹ ನಿರ್ಮಾಣಕ್ಕೆ ಆಕ್ಷೇಪಿಸಿದರು. ಉದ್ದೇಶಿತ ಸ್ಥಳದಲ್ಲಿ ಸಭಾಂಗಣ ಇಲ್ಲವೆ, ಮಾಹಿತಿ ಕೇಂದ್ರ ನಿರ್ಮಿಸುವಂತೆ ಜಿಲ್ಲಾಡಳಿತ ಗಮನಕ್ಕೆ ತರಲಾಗುವುದು ಎಂದರು.

ನಗರಸಭೆ ಸದಸ್ಯರಾದ ವಾಸುದೇವ ನವಲಿ, ನವೀನ ಮಾಲಿ ಪಾಟೀಲ್, ಅಜಯ ಬಿಚ್ಚಾಲಿ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪ ನಾಯಕ, ಗ್ರಾಪಂ ಸದಸ್ಯ ಮಂಜುನಾಥಗೌಡ, ತಾಪಂ ಮಾಜಿ ಅಧ್ಯಕ್ಷೆ ರಾಜೇಶ್ವರಿ ಸುರೇಶ, ಬಿಜೆಪಿ ಮುಖಂಡರಾದ ಎಚ್.ಸಿ.ಯಾದವ್, ಡಿ.ಎಂ.ಸುರೇಶ, ಪದ್ಮನಾಭ್, ಹರಿಹರ ದೇವರಾಯ, ಮಂತ್ರಾಲಯದ ಮಠದ ಪ್ರತಿನಿಧಿ ಸುಮಂತ ಕುಲ್ಕರ್ಣಿ, ಅರ್ಚಕ ವಿಜೇಯೇಂದ್ರಾಚಾರ್ ಇತರರಿದ್ದರು.

ಸಚಿವರಾದ ನಂತರ ಅನುದಾನ ನೀಡಿ
ನವವೃಂದಾವನಗಡ್ಡಿಯಲ್ಲಿ ಶ್ರೀ ವ್ಯಾಸರಾಜ ತೀರ್ಥರ ದರುಶನ ಪಡೆದುಕೊಂಡ ನಂತರ, ಶ್ರೀ ಪ್ರಾಣದೇವರು ಮತ್ತು ಶ್ರೀಪದ್ಮನಾಭ ತೀರ್ಥರ ವೃಂದಾವನದ ಬಳಿ ಶಾಸಕ ಪರಣ್ಣ ಮುನವಳ್ಳಿ ವಿಶೇಷ ಪೂಜೆ ಸಲ್ಲಿಸಿದರು. ನವವೃಂದಾವನ ಗಡ್ಡಿಯ ಭದ್ರತೆ ವಿಚಾರದಲ್ಲಿ ಶಾಸಕರ ಅನುದಾನ ನೀಡಲು ಸಿದ್ಧರಿದ್ದರೂ, ಸಚಿವರಾದ ನಂತರ ಅನುದಾನ ನೀಡಿ ಎಂದು ಮಂತ್ರಾಲಯದ ಮಠದ ಶ್ರೀ ಸುಬುಧೇಂದ್ರ ತೀರ್ಥರು ಅನುಗ್ರಹ ಪೂರಕ ಆಶೀರ್ವದಿಸಿದರು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...