More

    ಶಿಕ್ಷಕರ ನೇಮಕದಲ್ಲೂ ಪದವೀಧರರಿಗೆ ಅನ್ಯಾಯ

    ಗಂಗಾವತಿ: ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಸೇಷನ್ ಜಿಲ್ಲಾ ಸಮಿತಿ ಸದಸ್ಯರು ನಗರದ ಶ್ರೀ ಬಸವೇಶ್ವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಬುಧವಾರ ಮನವಿ ಸಲ್ಲಿಸಿದರು.

    ಜಿಲ್ಲಾ ಕಾರ್ಯದರ್ಶಿ ಶರಣುಗಡ್ಡಿ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಂಗೀತ, ಚಿತ್ರಕಲೆ, ರಂಗಕಲೆ ಮತ್ತು ದೈಹಿಕ ಶಿಕ್ಷಕರ ನೇಮಕಕ್ಕಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. 5 ಸಾವಿರಕ್ಕೂ ಹೆಚ್ಚು ಶಾಲೆಗಳಿದ್ದರೂ, 1500 ಶಿಕ್ಷಕರು ಮಾತ್ರ ಕೆಲಸ ನಿರ್ವಹಿಸುತ್ತಿದ್ದಾರೆ. ವಿಷಯ ಹೊರತುಪಡಿಸಿ ಉಳಿದ ಶಿಕ್ಷಕರ ನೇಮಕದಲ್ಲೂ ಪದವೀಧರರಿಗೆ ಅನ್ಯಾಯವಾಗುತ್ತಿದ್ದು, ಹಲವು ವರ್ಷಗಳಿಂದ ನೇಮಕ ಪ್ರಕ್ರಿಯೆ ನಡೆದಿಲ್ಲ.

    ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಮೌಲ್ಯಯುತ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯುತ್ತಿಲ್ಲ. ಕಡಿಮೆ ಗೌರವಧನದಿಂದ ಅತಿ ಹೆಚ್ಚು ಅವಧಿಯಲ್ಲಿ ಕೆಲಸ ಮಾಡಿಸಿಕೊಳ್ಳುವ ಸರ್ಕಾರ, ಸೇವಾ ಭದ್ರತೆ ಒದಗಿಸುವ ವಿಷಯದಲ್ಲಿ ಮೀನಮೇಷ ಎಣಿಸುತ್ತಿದೆ. ನೇಮಕ ಪ್ರಕ್ರಿಯೆಗೆ ಚಾಲನೆ ನೀಡದಿದ್ದರೆ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಚ್ಚರಿಸಿದರು.

    ಜಿಲ್ಲಾಧ್ಯಕ್ಷ ರಮೇಶ ವಂಕಲಕುಂಟ, ರಂಗಕರ್ಮಿ ಲಕ್ಷಣ್ ಪಿರಗಾರ, ಸಮಿತಿ ಪದಾಧಿಕಾರಿಗಳಾದ ಶರಣು ಶೆಟ್ಟರ್, ಎಂ. ಭೈರವ ಪೂಜಾರ, ಮಂಜುನಾಥ ತಳವಾರ, ಪ್ರಿಯಾಂಕಾ ಕಿನ್ನಾಳ, ದೇವರಾಜ ಗುಲಬುರ್ಗ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts