More

    ವಿದ್ಯೆ-ವಿನಯದಿಂದ ಉನ್ನತ ಸಾಧನೆ

    ಗಂಗಾವತಿ: ಶಾಲೆಯ ಹಳೇ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕಿದ್ದು, ಕಲಿಯುವ ವಿದ್ಯಾರ್ಥಿಗಳಿಗೆ ನೆರವಾಗುವಂತೆ ನಿವೃತ್ತ ಶಿಕ್ಷಕ ವೀರಯ್ಯ ಜಡಿಮಠ ಸಲಹೆ ನೀಡಿದರು.

    ತಾಲೂಕಿನ ಕೇಸಕ್ಕಿ ಹಂಚಿನಾಳ್ ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ರಾಜ್ಯ ಸರ್ಕಾರಿ ಶಾಲಾ ಮುಖ್ಯಶಿಕ್ಷಕರ ಸಂಘ, ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಶಾಲೆಯ 63ನೇ ವರ್ಷದ ವಾರ್ಷಿಕೋತ್ಸವ, ಗುರುವಂದನಾ ಮತ್ತು ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

    ವಿದ್ಯೆ ಮತ್ತು ವಿನಯ ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ವಿದ್ಯೆ ಕಲಿಸಿದ ಗುರುಗಳನ್ನು ಗೌರವಿಸುತ್ತಿರುವುದು ಪ್ರಶಂಸನೀಯ. ಗ್ರಾಮೀಣ ಭಾಗದ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವಂತೆ ಸಲಹೆ ನೀಡಿದರು.

    ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗ್ರಾಮದಾದ್ಯಂತ ಮೆರವಣಿಗೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಶಾಲೆ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಮಾಜಿ ಶಾಸಕ ಜಿ.ವೀರಪ್ಪ, ಜಿಪಂ ಮಾಜಿ ಸದಸ್ಯ ಅಮರೇಶ ಗೋನಾಳ್, ಗ್ರಾಪಂ ಅಧ್ಯಕ್ಷೆ ಮಂಜುಳಾ ಶಿವನಗೌಡ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಚನ್ನಪ್ಪ ಮಳಗಿ, ಮುಖಂಡರಾದ ವೆಂಕಟೇಶ ತಂಗಡಗಿ, ನಾಗರಾಜ ಬಿಲ್ಗಾರ್, ರಡೇಪ್ಪ ಕೇಸರಹಟ್ಟಿ ಸೇರಿ ಹಳೇ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts