ಗಂಗಾವತಿ: ತಾಲೂಕಿನ ಶ್ರೀರಾಮನಗರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಆಷಾಢ ಮಾಸದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಮತ್ತು ಸಾಮೂಹಿಕ ಭಜನೆ ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ವಾಸವಿ ಮಹಿಳಾ ಸಂಘದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೂರ್ತಿಗೆ ವಿಶೇಷ ಪೂಜೆ, ಲಲಿತಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ, ನಿರಂತರ ಭಜನೆ ಮತ್ತು ಉಡಿ ತುಂಬುವ ಕಾರ್ಯಕ್ರಮ ಜರುಗಿತು.
ದೇವಾಲಯದ ಮುಖ್ಯಸ್ಥ ಪ್ರಸಾದರಾವ್ ಮಾತನಾಡಿ, ಆಷಾಢ ಕೊನೇ ಶನಿವಾರ ಹಿನ್ನೆಲೆಯಲ್ಲಿ ಮೂರ್ತಿಗೆ ವಸ ಸಮರ್ಪಣೆ ಕಾರ್ಯಕ್ರಮ ಜರುಗಿದ್ದು, ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು ಎಂದರು. ಮುಖಂಡರಾದ ಮೋಹನ್, ವೆಂಕಟರತ್ನಂ, ನಾಗರಾಜ್, ವೀರೇಶ, ಪದ್ಮಾಬಾಯಿ, ದೇವಾಲಯದ ಪ್ರಧಾನ ಅರ್ಚಕ ಆನಂದಾಚಾರ್ ಇತರರಿದ್ದರು.