More

    ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಬಿಡುಗಡೆಗೊಳಿಸಿ: ಎಸ್‌ಎಫ್ಐನಿಂದ ಶಾಸಕ ಪರಣ್ಣ ಮುನವಳ್ಳಿಗೆ ಮನವಿ

    ಗಂಗಾವತಿ: ಎಸ್ಸಿ, ಎಸ್ಟಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಎಸ್‌ಎಫ್ಐ ತಾಲೂಕು ಸಮಿತಿ ಸದಸ್ಯರು ನಗರದ ಕನಕದಾಸ ವೃತ್ತದಲ್ಲಿ ಶಾಸಕ ಪರಣ್ಣಮುನವಳ್ಳಿಗೆ ಭಾನುವಾರ ಮನವಿ ಸಲ್ಲಿಸಿದರು.

    ಶಾಲೆ, ಕಾಲೇಜು ವಿದ್ಯಾರ್ಥಿಗಳೊಂದಿಗೆ ಶಾಸಕರನ್ನು ಭೇಟಿ ಮಾಡಿದ ಸದಸ್ಯರು, ಪ್ರೋತ್ಸಾಹಧನ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಒತ್ತಾಯಿಸಿದರು. ಎಸ್‌ಎ್ಐ ಅಧ್ಯಕ್ಷ ಅಮರೇಶ ಕಡಗದ್ ಮಾತನಾಡಿ, ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಎಸ್ಸೆಸ್ಸೆಲ್ಸಿ, ಪಿಯು, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಪ್ರಥಮದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವಿದೆ. 15ಸಾವಿರ ರೂ.ಗಳಿಂದ 35ಸಾವಿರ ರೂ.ವರೆಗೂ ಸಮಾಜ ಕಲ್ಯಾಣ ಇಲಾಖೆಯಿಂದ ಕೊಡಲಾಗುತ್ತದೆ. ಎರಡು ವರ್ಷಗಳಿಂದ ಅನುದಾನ ಬಂದಿಲ್ಲ. 10ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ನೂರಾರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಇಲ್ಲಿಯವರೆಗೆ ಬಂದಿಲ್ಲ. ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕೂಡಲೇ ಸರ್ಕಾರದ ಮೇಲೆ ಒತ್ತಡ ಹಾಕಿ ಪ್ರೋತ್ಸಾಹಧನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts