More

    ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಆದ್ಯತೆ: ಸಂಸದ ಕರಡಿ ಸಂಗಣ್ಣ ಹೇಳಿಕೆ

    ಗಂಗಾವತಿ: ನಗರದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಗಮನಹರಿಸಲಾಗುವುದು ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು.

    ನಗರದ ತಾಲೂಕು ಕ್ರೀಡಾಂಗಣದಲ್ಲಿ ಪಪೂ ಶಿಕ್ಷಣ ಇಲಾಖೆ ಮತ್ತು ಎಂಎಸ್‌ಎಂಎಸ್ ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ಪಪೂ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಮತ್ತು ಸಬಲೀಕರಣ ಇಲಾಖೆ ಅನುದಾನ ಸಮರ್ಪಕ ಬಳಸಿಕೊಳ್ಳಲಾಗಿದ್ದು, ಕೇಂದ್ರ ಸರ್ಕಾರದ ಪ್ರೋತ್ಸಾಹದಿಂದ ಗ್ರಾಮೀಣ ಭಾಗದ ಆಟಗಾರರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ತಾಲೂಕು ಕ್ರೀಡಾಂಗಣದಲ್ಲಿ ಕ್ರೀಡಾಸ್ಫೂರ್ತಿ ಮಲ್ಟಿ ಸ್ಟೋರ್ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಮಕ್ಕಳಲ್ಲಿ ಕ್ರೀಡಾಸಕ್ತಿ ಹೆಚ್ಚಾಗಬೇಕಿದೆ ಎಂದರು.

    ಶಾಸಕ ಪರಣ್ಣಮುನವಳ್ಳಿ ಮಾತನಾಡಿ, ತಾಲೂಕು ಕ್ರೀಡಾಂಗಣದಲ್ಲಿ ಹೊರಾಂಗಣ, ಒಳಾಂಗಣ ಮೈದಾನದ ಜತೆಗೆ ಯೋಗ ಮಂದಿರಕ್ಕೂ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

    ಶಾಸಕ ಬಸವರಾಜ ದಢೇಸುಗೂರು ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಕ್ರೀಡೆಯಲ್ಲಿ ಸಕ್ರಿಯರಾಗಬೇಕಿದೆ. ಕ್ರೀಡಾ ಪೂರಕ ವಾತಾವರಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ ಎಂದರು.

    ಕ್ರೀಡಾಕೂಟದಲ್ಲಿ 22 ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಕಡೆಗಣಿಸಿದ್ದು, ಸರಿಪಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರತಿನಿಧಿಗಳು ಶಾಸಕ ಪರಣ್ಣ ಮುನವಳ್ಳಿಗೆ ಮನವಿ ಸಲ್ಲಿಸಿದರು.

    ನಯೋಪ್ರಾ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ, ಡಿಡಿಪಿಯು ವಿ.ಎಂ.ಭೂಸನೂರಮಠ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಂ.ತಿಪ್ಪೇರುದ್ರಸ್ವಾಮಿ, ಎಂಎಸ್‌ಎಂಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ಎಂ.ಸಿದ್ರಾಮಯ್ಯಸ್ವಾಮಿ, ನಗರಸಭೆ ಸದಸ್ಯರಾದ ಉಮೇಶ ಸಿಂಗನಾಳ್, ಪರಶುರಾಮ ಮಡ್ಡೇರ್, ವಿವಿಧ ಕಾಲೇಜು ಪ್ರಾಚಾರ್ಯರಾದ ಟಿ.ಶಾಂತಪ್ಪ, ಬಸಪ್ಪ ನಾಗೋಲಿ, ಡಾ.ಎನ್.ರವಿಚವ್ಹಾಣ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಜಾಪಾಳ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts