More

    ತಾಲೂಕು ಕ್ರೀಡಾಂಗಣದಲ್ಲಿ ಈಜುಕೊಳ: ಶಾಸಕ ಪರಣ್ಣ ಮುನವಳ್ಳಿ ಹೇಳಿಕೆ

    ಗಂಗಾವತಿ: ತಾಲೂಕು ಕ್ರೀಡಾಂಗಣದಲ್ಲಿ ಈಜುಕೊಳ ಅಭಿವೃದ್ಧಿ ಜತೆಗೆ ಆಟೋಟಗಳ ವ್ಯವಸ್ಥೆ ಕಲ್ಪಿಸಲಾಗುವುದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

    ನಗರದ ತಾಲೂಕು ಕ್ರೀಡಾಂಗಣದಲ್ಲಿ ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗುರುವಾರ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಯೋಗ ಮಂದಿರ ನಿರ್ಮಿಸಿದ್ದು, ಒಳಾಂಗಣ ಕ್ರೀಡೆಗಳಿಗೆ ಪ್ರತ್ಯೇಕ ಭವನವಿದೆ. ಈಜುಕೊಳ ನಿರ್ವಹಣೆಗೆ ಶೀಘ್ರವೇ ಟೆಂಡರ್ ಕರೆಯಲಾಗುತ್ತಿದ್ದು, ಹ್ಯಾಂಡ್‌ಬಾಲ್ ಕೋರ್ಟ್ ನಿರ್ಮಾಣಕ್ಕೆ ಕೆಕೆಆರ್‌ಡಿಬಿ ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಲಾಗುವುದು.

    ಕ್ರೀಡೆಯಲ್ಲಿ ಪಾಲ್ಗೊಂಡವರಿಗೆ ಎಲ್ಲ ಕ್ಷೇತ್ರದಲ್ಲೂ ಮಾನ್ಯತೆಯಿದ್ದು, ಮೀಸಲು ಪಡೆಯಲು ಸಾಧ್ಯವಿದೆ. ಹೀಗಾಗಿ ವಿದ್ಯಾರ್ಥಿ, ಯುವ ಸಮೂಹ ಹೆಚ್ಚಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ನಯೋಪ್ರಾ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ ಮಾತನಾಡಿದರು.100ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಜಿಪಂ ಮಾಜಿ ಸದಸ್ಯ ಎಚ್.ಎಂ. ಸಿದ್ರಾಮಯ್ಯಸ್ವಾಮಿ, ನಗರಸಭೆ ಸದಸ್ಯರಾದ ಉಮೇಶ ಸಿಂಗನಾಳ್, ಪರಶುರಾಂ ಮಡ್ಡೇರ್, ಮಾಜಿ ಸದಸ್ಯರಾದ ರಾಚಪ್ಪ ಸಿದ್ದಾಪುರ, ಮನೋಹರಗೌಡ ಹೇರೂರು, ಕ್ರೀಡಾಧಿಕಾರಿ ರಂಗಸ್ವಾಮಿ ನಾಯಕ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಜಾಪಾಳ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts