More

    ಸಮುದಾಯದ ಅಭಿವೃದ್ಧಿಗೆ ಸಮಯ ಮೀಸಲಿಡಿ

    ಗಂಗಾವತಿ: ಶಿಕ್ಷಣ ಕ್ರಾಂತಿಯಿಂದ ಎಲ್ಲ ರೀತಿಯಲ್ಲಿ ಗೌರವ ಪಡೆಯಲು ಸಾಧ್ಯವಿದ್ದು, ಸಮುದಾಯದ ನಿರೀಕ್ಷಿತ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

    ನಗರದ ಶ್ರೀ ಚನ್ನಬಸವ ಸ್ವಾಮಿ ಸಮುದಾಯ ಭವನದಲ್ಲಿ ವೀರಶೈವ ಲಿಂಗಾಯತ ನೌಕರರ ಸಂಘ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಸಮುದಾಯ ಸಂಘಟನಾತ್ಮಕವಾಗಿ ಹಕ್ಕುಗಳನ್ನು ಪಡೆಯಬೇಕಿದ್ದು, ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕಿದೆ. ಉನ್ನತ ಸಾಧನೆ ಮಾಡಿದ ಪ್ರತಿಭೆಗಳು ಸಮುದಾಯದ ಅಭಿವೃದ್ಧಿಗೆ ಸಮಯ ಮೀಸಲಿಡುವಂತೆ ಸಲಹೆ ನೀಡಿದರು.

    ಸಾನ್ನಿಧ್ಯವಹಿಸಿದ್ದ ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯ ಮಾತನಾಡಿ, ಪ್ರತಿಭೆಗಳನ್ನು ಗುರುತಿಸುವ ಮೂಲಕ ಸಮುದಾಯ ಉತ್ತಮ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಬೇಕಿದೆ ಎಂದರು.

    ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೌಕರರನ್ನು ಸನ್ಮಾನಿಸಲಾಯಿತು.

    ತಹಸೀಲ್ದಾರ್ ಮಂಜುನಾಥ ಭೋಗಾವತಿ, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ, ವೀರಶೈವ ಸಮುದಾಯದ ಮುಖಂಡರಾದ ಸೋಮನಾಥ ಪಟ್ಟಣಶೆಟ್ಟಿ, ಕಳಕನಗೌಡ, ಡಾ.ಶಿವಕುಮಾರ ಮಾಲಿಪಾಟೀಲ್, ಸುರೇಶ ಸಿಂಗನಾಳ್, ಶರಣೇಗೌಡ, ಶಾಂತವೀರಯ್ಯಸ್ವಾಮಿ ಗಂಧದಮಠ, ಶಿವಪ್ಪ ಯಲಬುರ್ಗಿ, ವೀರಶೈವ ಲಿಂಗಾಯತ ನೌಕರರ ಸಂಘದ ತಾಲೂಕು ಅಧ್ಯಕ್ಷ ಶರಣಪ್ಪ ಹಕ್ಕಂಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts