More

    ಕಾನೂನು ಸೇವೆಗಳ ದಿನಾಚರಣೆ, ‘ಎಲ್ಲ ಇಲಾಖೆಗಳ ನೆರವಿನೊಂದಿಗೆ ಅರಿವು’

    ಗಂಗಾವತಿ: ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದಕ್ಕಾಗಿ ಕಾರ್ಯಾಗಾರ ಆಯೋಜಿಸಲಾಗುತ್ತಿದೆ. ಆಕಸ್ಮಿಕವಾಗಿ ಪ್ರಕರಣಗಳಲ್ಲಿ ಸಿಲುಕಿ ಆರೋಪಿಯಾದವರಿಗೆ ಕಾನೂನಿನ ಉಚಿತ ನೆರವಿನ ವ್ಯವಸ್ಥೆಯಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಜಿ.ಶಿವಳ್ಳಿ ಹೇಳಿದರು.

    ನಗರದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಪೊಲೀಸ್ ಇಲಾಖೆ ಮತ್ತು ವಕೀಲರ ಸಂಘದಿಂದ ಮಂಗಳವಾರ ಆಯೋಜಿಸಿದ್ದ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗಾಂಧಿ ಜಯಂತಿಯಂದು ಆರಂಭವಾದ ಕಾನೂನು ಅರಿವು ಮತ್ತು ನೆರವು ಕಾರ್ಯಾಗಾರವನ್ನು ಬಹುತೇಕ ಗ್ರಾಮಗಳಲ್ಲಿ ಆಯೋಜಿಸಿ ಸಂಪನ್ಮೂಲ ವ್ಯಕ್ತಿಗಳಿಂದ ಕಾನೂನಿನ ಬಗ್ಗೆ ಉಪನ್ಯಾಸ ಕೊಡಿಸಲಾಗಿದೆ. ಎಲ್ಲ ಇಲಾಖೆಗಳ ನೆರವಿನೊಂದಿಗೆ ಅರಿವು ಮೂಡಿಸುವ ಕೆಲಸವಾಗುತ್ತಿದ್ದು, ತ್ವರಿತಗತಿಯಲ್ಲಿ ಪ್ರಕರಣಗಳ ವಿಲೇವಾರಿಗೆ ಸಹಕಾರಿಯಾಗಿದೆ ಎಂದರು.

    ಪ್ರಧಾನ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ.ಮೂಗತಿ ಮಾತನಾಡಿ, ನ್ಯಾಯಾಲಯಕ್ಕೆ ಹೋದರೆ ಸಮಯ ಮತ್ತು ಹಣ ವ್ಯರ್ಥವಾಗಲಿದೆ ಎಂಬ ಭಾವನೆಯಿತ್ತು. ಇತ್ತೀಚಿನ ದಿನಗಳಲ್ಲಿ ಕಾನೂನು ನೆರವು ಸಮಿತಿ ಕಾಯ್ದೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು, ಸೀಮಿತ ಅವಧಿಯಲ್ಲಿ ಪ್ರಕರಣಗಳ ಇತ್ಯರ್ಥವಾಗುತ್ತಿವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts