More

    ಆದಾಯಕ್ಕಿಂತ ಅಧಿಕ ಆಸ್ತಿ ಸಾಬೀತು, ಕರಾವಳಿ ಕಾವಲು ಪಡೆ ನಿರೀಕ್ಷಕ ಗಂಗಿ ರೆಡ್ಡಿಗೆ ನಾಲ್ಕು ವರ್ಷ ಜೈಲು

    ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕರಾವಳಿ ಕಾವಲು ಪಡೆಯ ಪೊಲೀಸ್ ನಿರೀಕ್ಷಕ ಗಂಗಿ ರೆಡ್ಡಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ನಾಲ್ಕು ವರ್ಷ ಸಾದಾ ಜೈಲು ಶಿಕ್ಷೆ ಮತ್ತು ಐದು ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

    ಹನ್ನೊಂದು ವರ್ಷಗಳ ಹಿಂದೆ 2009ರ ಆ.27ರಂದು ಗಂಗಿ ರೆಡ್ಡಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದಾಗ ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದಾರೆಂದು ಆರೋಪಿಸಿ ಆಗಿನ ಲೋಕಾಯುಕ್ತ ಡಿವೈಎಸ್‌ಪಿ ಸದಾನಂದ ವರ್ಣೇಕರ್ ಮತ್ತು ಅವರ ತಂಡ ದಾಳಿ ನಡೆಸಿ ಪ್ರಕರಣ ದಾಖಲಿಸಿತ್ತು. 19 ಲಕ್ಷ ರೂ. ಮೊತ್ತದ ಆಸ್ತಿ ಪತ್ತೆಯಾದ ಬಗ್ಗೆ ವರದಿ ಮಾಡಿತ್ತು. ಬಳಿಕ ಡಿವೈಎಸ್‌ಪಿ ಎಂ.ವಿಠಲದಾಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

    ಸರ್ಕಾರದ ಪರ 22 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯ, ವಿಶೇಷ ಸರ್ಕಾರಿ ಅಭಿಯೋಜಕ ಕೆ.ಎಸ್.ಎನ್.ರಾಜೇಶ್ ಅವರ ವಾದ ಪುರಸ್ಕರಿಸಿ, ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಪು ಪ್ರಕಟಿಸಿದೆ.

    ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 13 (1) (ಇ) ರ ಅಡಿ ಆರೋಪಿ ಗಂಗಿ ರೆಡ್ಡಿ ಅಪರಾಧಿ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts