ಗಂಗೊಳ್ಳಿ ಮೀನುಗಾರರ ಸಂಘಕ್ಕೆ ಪ್ರಶಸ್ತಿ

fishermen
ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಗೌರವಿಸಲಾಯಿತು
Published on

ಗಂಗೊಳ್ಳಿ: ಸಹಕಾರ ಕ್ಷೇತ್ರ ಹಾಗೂ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿದ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು ಮತ್ತು ವ್ಯವಸ್ಥಾಪಕ ಮೋಹನ ಖಾರ್ವಿ ಅವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು. ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net