More

    ರೈತರ ಪ್ರತಿಭಟನೆಯಲ್ಲಿ ಕಾಣಿಸಿಕೊಂಡ ಕುಖ್ಯಾತ ಗ್ಯಾಂಗ್​ಸ್ಟರ್​!

    ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಖ್ಯಾತ ಗ್ಯಾಂಗ್​ಸ್ಟರ್​, ಪ್ರತ್ಯೇಕವಾದಿ ನಾಯಕ ಲಾಖಾ ಸಿಧಾನ ಕಾಣಿಸಿಕೊಂಡಿದ್ದಾನೆ. ಇದಲ್ಲದೆ ಈತ ಪ್ರತಿಭಟನಾ ನಿರತ ರೈತಿರಿಗೆ ಸಲಹೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

    ವೈರಲ್​ ಆಗಿರುವ ವಿಡಿಯೋದಲ್ಲಿ ದೆಹಲಿ ಹಾಗೂ ಪಂಜಾಬಿನ ಗಡಿಭಾಗವಾದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ ಲಾಖಾ ಸಿಧಾನ ಪೊಲೀಸರು ಅಶ್ರವಾಯು ಪ್ರಯೋಗಿಸಿದಾಗ ನಮ್ಮ ಮುಖದ ಮೇಲೆ ಧೂಳು ಬೀಳುತ್ತದೆ ಇದರಿಂದಾಗಿ ನಮ್ಮ ಚರ್ಮ ಹಾಳಾಗುತ್ತದೆ. ಆದ್ದರಿಂದ ರೈತರು ತಮ್ಮ ಮುಖಗಳಿಗೆ ಹಲ್ಲನ್ನು ಉ್ಜುವ ಪೇಸ್ಟ್​ಅನ್ನು ಹೆಚ್ಚಬೇಕು. ಇದರಿಂದ ಯಾವುದೇ ರೀತಿಯ ಚರ್ಮ ಸಮಸ್ಯೆ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

    ಇದನ್ನೂ ಓದಿ: ಪದಾರ್ಪಣೆ ಪಂದ್ಯದಲ್ಲೇ ವೇಗದ ಅರ್ಧಶತಕ; ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ಸರ್ಫರಾಜ್​

    ಇತ್ತ ಲಾಖಾ ಸಿಧಾನ ರೈತರ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿರುವ ಸುದ್ದಿ ಹೊರಬೀಳುತ್ತಿದ್ದಂತೆ ದೆಹಲಿ ಪೊಲೀಸರು ಹೈ ಅಲರ್ಟ್​ ಘೋಷಿಸಿದ್ದಾರೆ. ಇದಲ್ಲದೆ ಆತ ತನ್ನ ಪ್ರಚೋದನಕಾರಿ ಭಾಷಣದ ಮೂಲಕ ರೈತರನ್ನು ಪೊಲೀಸರನ್ನು ಎತ್ತಿ ಕಟ್ಟುತ್ತಿದ್ದಾನೆ. ಇದರಿಂದಾಗಿ ರೈತರ ಪ್ರತಿಭಟನೆಯಲ್ಲಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    2021 ಜನವರಿ 26ರಂದು ನಡೆದಿದ್ದ ಕೆಂಪುಕೋಟೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಯಾಗಿರುವ ಲಾಖಾ ಸಿಧಾನ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾನೆ. ಈತನ ವಿರುದ್ಧ ಹಲವು ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಈತ ಪ್ರತ್ಯೇಕವಾದಿಗಳ ಜೊತೆ ಗುರುತಿಸಿಕೊಂಡಿದ್ದಾನೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts