ರಾಯಚೂರು ಗಾಣಿಗ ಸಮಾಜವು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.75 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಹಾಗೂ ವೈದ್ಯಕೀಯ ಪದವಿ (2024-25) ಪೂರ್ಣಗೊಳಿಸಿರುವ ಜಿಲ್ಲಾ ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲು ಅರ್ಜಿ ಆಹ್ವಾನ ಮಾಡಲಾಗಿದೆ.

ಪ್ರತಿಭಾ ಪುರಸ್ಕಾರಕ್ಕಾಗಿ ರಾಯಚೂರು ಜಿಲ್ಲಾ ಗಾಣಿಗ ಸಮಾಜದ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಉಮಾ ಶಂಕರ ವಕೀಲ 9844081594, ಮಹಾದೇವ ಎಸ್. ಪಾಟೀಲ -7411140065 ಇವರನ್ನು ಮೇ 25 ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ನಂತರದಲ್ಲಿ ಬಂದ ಹೆಸರುಗಳನ್ನು ಪರಿಗಣಿಸಲಾಗುವುದಿಲ್ಲ. ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜೂನ್. 01 ರಂದು ರಾಯಚೂರು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ತಾಲೂಕ ಅಧ್ಯಕ್ಷ ಬಸಪ್ಪ ಹಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.