ಅಸ್ಸಾಂನಲ್ಲಿ 4,700 ಕೆ.ಜಿ ಗಾಂಜಾ ವಶ: ಪೊಲೀಸರ ನೋಡಿದ ಕೂಡಲೇ ಎಸ್ಕೇಪ್​

ganja
Published on

ಗುವಾಹಟಿ: ಅಸ್ಸಾಂನ ಕರೀಂಗಂಜ್​ ಜಿಲ್ಲೆಯಲ್ಲಿ 4,700 ಕೆ.ಜಿ.ಗೂ ಅಧಿಕ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪತ್ತೆಯಾಗಿರುವ ಅತಿ ದೊಡ್ಡ ಮಾದಕ ವಸ್ತು ಪ್ರಕರಣಗಳಲ್ಲಿ ಇದೂ ಕೂಡ ಒಂದಾಗಿದೆ ಎಂದು ಅವರು ಹೇಳಿದ್ದಾರೆ. ಪೊಲೀಸರು ಚುರೈಬರಿ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಿಯಮಿತ ತಪಾಸಣೆ ನಡೆಸುತ್ತಿದ್ದಾಗ ತ್ರಿಪುರಾದಿಂದ ಆಗಮಿಸುತ್ತಿದ್ದ ಟ್ರಕ್​ನಲ್ಲಿ ಈ ನಿಷಿದ್ಧ ವಸ್ತುವನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿತು.

ನೈಸರ್ಗಿಕ ರಬ್ಬರ್​ ಹಾಳೆಗಳ ಅಡಿಯಲ್ಲಿ ಅಡಗಿಸಿ ಇಡಲಾಗಿದ್ದ 4,728 ಕೆ.ಜಿಗೂ ಅಧಿಕ ಪ್ರಮಾಣದ ಗಾಂಜಾವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎಂದು ಶರ್ಮಾ ಟ್ವೀಟ್​ ಮಾಡಿದ್ದಾರೆ.

ಪೊಲೀಸ್​ ಚೆಕ್​ ಪಾಯಿಂಟ್​ ನೋಡಿದ ಕೂಡಲೇ ಟ್ರಕ್​ ಚಾಲಕ ವಾಹನವನ್ನು ನಿಲ್ಲಿಸಿ ಕತ್ತಲೆಯಲ್ಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ವಾಹನ ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net