ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತ್ಯಾಜ್ಯ ರಾಶಿ

thyajya
Published on

ಕೋಟ: ಕೋಟ ಮಣೂರು ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲೇ ಕಿಡಿಗೇಡಿಗಳು ಎರಡು ದಿನಗಳಿಂದ ತ್ಯಾಜ್ಯ ಎಸೆಯುತ್ತಿದ್ದು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.

ಸೋಮವಾರ ರಾತ್ರಿ ಬೆಳಗಾಗುವುದರೊಳಗೆ ಭಾರಿ ಗಾತ್ರದ ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು. ಮಂಗಳವಾರ ಮುಂಜಾನೆಯೊಳಗೆ ಮತ್ತೆ ಮೂರು ತ್ಯಾಜ್ಯದ ಚೀಲ ಅದೇ ಡಿವೈಡರ್ ಮಧ್ಯದಲ್ಲಿ ಕಾಣಿಸಿಕೊಂಡಿತ್ತು. ಕೋಟ ಪಂಚವರ್ಣ ಸಂಘಟನೆ ಅಧ್ಯಕ್ಷ ಮನೋಹರ್ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ನಿರ್ವಹಿಸುತ್ತಿರುವ ಕೆ.ಕೆ.ಆರ್. ಕಂಪನಿ ಹಾಗೂ ಕೋಟ ಗ್ರಾಪಂಗೆ ಮಾಹಿತಿ ನೀಡಿದ್ದಾರೆ. ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮರಾ ಅಳವಡಿಸಲು ಸ್ಥಳೀಯಾಡಳಿತ ಅಥವಾ ಕೆ.ಕೆ.ಆರ್. ಕಂಪನಿಗೆ ಸ್ಥಳೀಯರು ಮತ್ತು ಸಂಘ ಸಂಸ್ಥೆಗಳು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net