More

    ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ

    ಹಾಸನ: ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರವೊಂದಕ್ಕೆ ಸಿಲುಕಿ ಯುವತಿಯೊಬ್ಬಳು ಸಾವಿಗೀಡಾಗಿದ್ದು, ಆಕೆಯ ಕುಟುಂಬ ಮಾತ್ರವಲ್ಲದೆ ಸಹೋದ್ಯೋಗಿಗಳೆಲ್ಲರೂ ದುಃಖಿತರಾಗಿದ್ದಾರೆ. ಹಾಸನದ ಗಾರ್ಮೆಂಟ್ ಫ್ಯಾಕ್ಟರಿಯೊಂದರಲ್ಲಿ ಈ ದುರಂತ ಸಂಭವಿಸಿದೆ.

    ಹಾಸನದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಶಾಹಿ ಗಾರ್ಮೆಂಟ್​ನಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯಾ ಮೃತಪಟ್ಟವರು. ಹೊಳೆನರಸೀಪುರ ಮೂಲದ ದೊಡ್ಡಬ್ಯಾಗತವಳ್ಳಿ ಗ್ರಾಮದ ಕಾವ್ಯ ಎಂದಿನಂತೆ ಶುಕ್ರವಾರವೂ ಕೆಲಸಕ್ಕೆ ಬಂದಿದ್ದು, ಸಣ್ಣದೊಂದು ಆಕಸ್ಮಿಕ ಆಕೆ ಜೀವವನ್ನೇ ಕಳೆದುಕೊಳ್ಳುವಂತೆ ಮಾಡಿದೆ.

    ಗಾರ್ಮೆಂಟ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅಲ್ಲಿನ ಪ್ರಿಂಟಿಂಗ್ ಮಷಿನ್​ನೊಂದಕ್ಕೆ ಕಾವ್ಯಾಳ ಕೈ ಸಿಲುಕಿಕೊಂಡಿತ್ತು. ಅದು ದೇಹವನ್ನೂ ಎಳೆದುಕೊಂಡಿತ್ತು. ತಕ್ಷಣ ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾವ್ಯಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

    ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ
    ದುರಂತ ಸಂಭವಿಸಿದ್ದ ಗಾರ್ಮೆಂಟ್ ಫ್ಯಾಕ್ಟರಿ​ ಒಳಗಿನ ದೃಶ್ಯ
    ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ
    ಯುವತಿಯ ಕೈ ಸಿಲುಕಿಕೊಂಡಿದ್ದ ಯಂತ್ರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts