More

    ಕಡೂರಲ್ಲಿ ಶೀಘ್ರ ಗಾರ್ಮೆಂಟ್ಸ್ ಆರಂಭ

    ಚೌಳಹಿರಿಯೂರು: ಕಡೂರು ತಾಲೂಕಿನಲ್ಲಿ ಶೀಘ್ರದಲ್ಲಿಯೇ ಗಾರ್ಮೆಂಟ್ಸ್ ಪ್ರಾರಂಭಿಸಲಾಗುವುದು. ಇದರಿಂದ ಗ್ರಾಮಿಣ ಮಹಿಳೆಯರಿಗೆ ಅನುಕೂಲವಾಗುತ್ತದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
    ಗ್ರಾಪಂ ಆವರಣದಲ್ಲಿ ಹೋಬಳಿ ವ್ಯಾಪ್ತಿಯ ಐದು ಗ್ರಾಪಂಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿ, ಗೃಹಲಕ್ಷ್ಮೀ, ಉಚಿತ ವಿದ್ಯುತ್, ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ ಇವುಗಳಲ್ಲಿರುವ ಲೋಪದೋಷಗಳನ್ನು ಸಾಧ್ಯವಾದಷ್ಟು ಸ್ಥಳೀಯವಾಗಿ ಪರಿಹರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
    ಹುರುಕನಹಳ್ಳಿ ಸುಜಾತ ಮಾತನಾಡಿ, ಶಕ್ತಿ ಯೋಜನೆ ರೈತಾಪಿ ಮಹಿಳೆಯರಿಗೆ ಉಪಯೋಗವಾಗುತ್ತಿಲ್ಲ . ಇದು ಕೇವಲ ಮಧ್ಯಮ ವರ್ಗದ ಮಹಿಳೆಯರಿಗೆ ಮಾತ್ರ ಅನುಕೂಲವಾಗಿದೆ. ಚೌಳಹಿರಿಯೂರು ಹೋಬಳಿಗೆ ಸಂಪೂರ್ಣವಾಗಿ ಬಸ್‌ಗಳು ಬರುವುದಿಲ್ಲ. ಇದರಿಂದ ಇಲ್ಲಿನ ಗ್ರಾಮಸ್ಥರಿಗೆ ಯೋಜನೆಯ ಲಾಭ ಸಿಗುತ್ತಿಲ್ಲ. ಈ ಯೋಜನೆ ಬದಲಿಗೆ ನೀರಾವರಿ, ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
    ತಹಸೀಲ್ದಾರ್ ಕವಿರಾಜ್ ಮಾತನಾಡಿ, ಸರ್ಕಾರದ ಆದೇಶದಂತೆ ಗ್ಯಾರಂಟಿ ಯೋಜನೆ ತಲುಪದವರಿಗೆ ತಲುಪಿಸುವ ಪ್ರಯತ್ನ ಈ ಕಾರ್ಯಕ್ರಮದಲ್ಲಿ ನಡೆಸಲಾಗಿದೆ. ಯೋಜನೆ ಸಂಬಧಪಟ್ಟ ಇಲಾಖೆ ಅಧಿಕಾರಿಗಳು ಯೋಜನೆಯಲ್ಲಿನ ಲೋಪಗಳ ಪರಿಶೀಲನೆ ನಡೆಸಲಿದ್ದಾರೆ. ಕೆಲವು ಅರ್ಜಿಗಳಲ್ಲಿ ತಾಂತ್ರಿಕ ದೋಷವಿದ್ದು ಅವುಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
    ಗ್ರಾಪಂ ಅಧ್ಯಕ್ಷೆ ಅನಿತಾ ಮಲ್ಲೇಶಪ್ಪ , ಸುಧಾ, ಸಿ.ಆರ್.ಪ್ರವೀಣ್, ಸುನೀಲ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts