ಹುಬ್ಬಳ್ಳಿ: ನಗರದ ಶ್ರೀ ಸಿದ್ದಾರೂಢ ಮಠದ ಬಳಿಯ ಬಾಫಣಾ ಲೇಔಟ್‌ನಲ್ಲಿ ಪ್ರತಿಷ್ಠಿತ ಗಾರ್ನಿಯರ್ ಕಂಪನಿಯಿಂದ ಭಾನುವಾರ ಹೇರ್ ಕಲರಿಂಗ್ ಅಭಿಯಾನ ನಡೆಯಿತು.
ಉತ್ಸಾಹದಿಂದ ಪಾಲ್ಗೊಂಡ ಸಾರ್ವಜನಿಕರು, ಮಹಿಳೆಯರು ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ಅಭಿಯಾನದ ಪ್ರಯೋಜನ ಪಡೆದುಕೊಂಡರು. ಕಂಪನಿಯ ಪರಿಣತರು, ಮಹಿಳೆಯರಿಗೆ ಇಷ್ಟವಾದ ಬಣ್ಣದ ಡೈ ಮಾಡಿಸಿದರು.
ಜೂ. 24ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಗೋಕುಲ ರಸ್ತೆ ಅರ್ಬನ್ ಓಯಸಿಸ್ ಮಾಲ್‌ನಲ್ಲಿರುವ ಪಿಯು ಪರಪ್ಯೂಮ್ಸ್ ಅಂಡ್ ಕಾಸ್ಕೆಟಿಕ್ಸ್‌ನಲ್ಲಿ ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನ ನಡೆದಿದ್ದು, ಈ ಅಭಿಯಾನವು ಜುಲೈ ತಿಂಗಳ ಅಂತ್ಯದವರೆಗೂ ಮುಂದುವರೆಯಲಿದೆ.
ಪ್ರತಿಷ್ಠಿತ ಗಾರ್ನಿಯರ್ ಕಂಪನಿಯಿಂದ ಹುಬ್ಬಳ್ಳಿ ಶ್ರೀ ಸಿದ್ದಾರೂಢ ಮಠದ ಬಳಿಯ ಬಾಫಣಾ ಲೇಔಟ್‌ನಲ್ಲಿ ಈ ಅಭಿಯಾನ ನಡೆದಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲರಿಂಗ್ ಮಾಡಿಸಿಕೊಂಡಿದ್ದಾರೆ.
ಸಾರ್ವಜನಿಕರಿಗೆ ಹೇರ್ ಕಲರಿಂಗ್ ಉಚಿತವಾಗಿದ್ದು, ಕಡ್ಡಾಯವಾಗಿ ಮೊಬೈಲ್ ಫೋನ್ ತಂದು ಒಟಿಪಿ ಆಧಾರಿತ ನೋಂದಣಿ ಮಾಡಿಸಿಕೊಂಡು ಈ ಅಭಿಯಾನದ ಪ್ರಯೋಜನ ಪಡೆಯಬಹುದು ಎಂದು ಆಯೋಜಕರು ತಿಳಿಸಿದ್ದಾರೆ.
ಸದ್ಯ ಈ ಅಭಿಯಾನ ಜುಲೈ ತಿಂಗಳ ಅಂತ್ಯದವರೆಗೂ ನಡೆಯಲಿದ್ದು, ನೀವೂ ಕೂಡಾ ಈ ಅಬಿಯಾನದ ಸದುಪಯೋಗವನ್ನ ಪಡೆದುಕೊಳ್ಳಬಹುದು.