More

    ಗ್ಯಾಸ್ ಸಿಲಿಂಡರ್ ಸೋರಿಕೆ ಶಂಕೆ: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ

    ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ಯರಗನಹಳ್ಳಿಯ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಮನೆಯೊಳಗೆ ಮಲಗಿದ್ದ ನಾಲ್ವರು ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಅಪಘಾತ: 3 ಭಾರತೀಯ ವಿದ್ಯಾರ್ಥಿಗಳ ಸಾವು

    ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19) ಮತ್ತು ಸ್ವಾತಿ (17) ಮೃತಪಟ್ಟವರು. ಮೇಲ್ನೋಟಕ್ಕೆ ಸಿಲಿಂಡರ್‌ ಸೋರಿಕೆಯಿಂದ ಈ ನಾಲ್ವರು ಉಸಿರುಗಟ್ಟಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತ ಕುಮಾರಸ್ವಾಮಿ ದಂಪತಿ ಮನೆಯಲ್ಲಿ ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಈ ಕಾರಣಕ್ಕಾಗಿ ಮೂರು ಸಿಲಿಂಡರ್ ಇಟ್ಟುಕೊಂಡಿದ್ದರು. ಅದರಲ್ಲಿ ಒಂದು ಸಿಲಿಂಡರ್ ಸೋರಿಕೆಯಾಗಿ ಈ ಸಾವುಗಳು ಸಂಭವಿಸಿವೆ ಎನ್ನಲಾಗುತ್ತಿದೆ.

    ಮೃತ ಕುಮಾರಸ್ವಾಮಿ ಕುಟುಂಬವೂ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಮೂಲದವರು. ಅಲ್ಲಿಯೆ ಸೋಮವಾರ ಇದ್ದ ಸಂಬಂಧಿಗಳ ಮದುವೆಗೆ ಕುಟುಂಬ ಸಮೇತರಾಗಿ ಹೋಗಿ ಸೋಮವಾರ ರಾತ್ರಿ ವಾಪಸ್ ಆಗಿದ್ದರು. 30 ವರ್ಷದಿಂದಲೂ ಮೈಸೂರಿನಲ್ಲೇ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಗ್ಯಾಸ್ ಸಿಲಿಂಡರ್ ಸೋರಿಕೆ ಶಂಕೆ: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ

    ಸೋಮವಾರ ರಾತ್ರಿ ಮನೆಯೊಳಗೆ ಮಲಗಿದ ಈ ಕುಟುಂಬ ಮತ್ತೆ ಮೇಲೆ ಎದ್ದಿಲ್ಲ. ನಿನ್ನೆ ಇವರ ಸಂಬಂಧಿಕರು ಹಲವು ಬಾರಿ ಇವರಿಗೆ ಕರೆ ಮಾಡಿದ್ದಾರೆ. ಯಾರು ಫೋನ್ ತೆಗದಿಲ್ಲ. ಇವತ್ತು ಬೆಳಗ್ಗೆಯೂ ಕರೆ ಮಾಡಿದ್ದಾಗ ಕರೆ ಸ್ವೀಕಾರ ಮಾಡದ ಕಾರಣ ಅನುಮಾನಗೊಂಡು ಅಕ್ಕಪಕ್ಕದ ಮನೆಯವರಿಗೆ ದೂರವಾಣಿ ಕರೆ ಮಾಡಿ ಮನೆಗೆ ಹೋಗಿ ನೋಡಿ ಎದ್ದಿದ್ದಾರೆ. ಆಗ ಪಕ್ಕದ ಮನೆಯವರು ಮನೆಗೆ ಬಂದು ಕಿಟಿಕಿ ಮೂಲಕ ನೋಡಿದ್ದಾಗ ಮೃತಪಟ್ಟಿರುವ ವಿಚಾರ ತಿಳಿದು ಬಂದಿದೆ.

    ಸ್ಥಳಕ್ಕೆ ಪೊಲೀಸ್‌ ಕಮಿಷನರ್‌ ರಮೇಶ್‌ ಬಾನೋತ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

    ಲೋಕಸಭೆ ಚುನಾವಣೆ: ಜನರು 140 ಸೀಟುಗಳಿಗೂ ಬಿಜೆಪಿ ಪರದಾಡುವಂತೆ ಮಾಡುತ್ತಾರೆ ಎಂದ ಅಖಿಲೇಶ್ ಯಾದವ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts