ಗಂಗಾವಳಿ ತೀರದಲ್ಲಿ ಗ್ಯಾಸ್ ಸೋರಿಕೆ ಆತಂಕ

DC order
Published on

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಗುಡ್ಡ, ನದಿ, ಹಳ್ಳಕೆರೆ ಹತ್ತಿರದಲ್ಲಿ ವಾಸಿಸುತ್ತಿರುವ ಕುಟುಂಬಸ್ಥರನ್ನು ಮತ್ತು ಸಾರ್ವಜನಿಕರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಅವಶ್ಯಕತೆ ಇರುತ್ತದೆ.

ಆದ್ದರಿಂದ ಜಿಲ್ಲೆಯ ಸಂಬಂಧಪಟ್ಟ ಎಲ್ಲ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ತಹಸೀಲ್ದಾರರು, ಸಹಾಯಕ ಆಯುಕ್ತರು ಕೂಡಲೇ ಮುನ್ನೆಚರಿಕೆ ಕ್ರಮವಾಗಿ ಗುಡ್ಡ, ನದಿ, ಹಳ್ಳ,ಕರ ದಡದಲ್ಲಿರುವ ಎಲ್ಲ ಮನೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮತ್ತು ಕಟ್ಟುನಿಟ್ಟಿನ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳಲು ಅದೇಶಿಸಿದೆ.

ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿ ಮೇಲೆ ಕಟ್ಟುನಿಟ್ಟಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net