ಹಿಂಡೆನ್‌ಬರ್ಗ್‌ ಕೇಸಲ್ಲಿ 'ಸುಪ್ರೀಂ' ರಿಲೀಫ್‌: ಸತ್ಯ ಜಯಿಸಿದೆ ಎಂದ ಅದಾನಿ

adani
Published on

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಇಂದು ಹಿಂಡನ್‌ಬರ್ಗ್ ವಿವಾದದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಸತ್ಯಮೇವ ಜಯತೆ ಎಂದು ಸ್ವಾಗತಿಸಿದ್ದಾರೆ. ಅಲ್ಲದೆ, ನಮ್ಮೊಂದಿಗೆ ನಿಂತವರಿಗೆ ಕೃತಜ್ಞರಾಗಿರುತ್ತೇನೆ ಎಂದು ಎಕ್ಸ್‌ (ಈ ಹಿಂದಿನ ಟ್ವಿಟ್ಟರ್‌) ನಲ್ಲಿ ತಿಳಿಸಿದ್ದಾರೆ.

ಹಿಂಡನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿಯ ತನಿಖೆಯನ್ನು ಅನುಮಾನಿಸಲು ಜಾರ್ಜ್ ಸೊರೊಸ್ ನೇತೃತ್ವದ ಒಸಿಸಿಆರ್‌ಪಿ ವರದಿಯು ಆಧಾರವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಇದು ಅದಾನಿ ಸಂಸ್ಥೆಗೆ ವಿಜಯ ದೊರೆತಂತಾಗಿದೆ.

ಭಾರತದ ಬೆಳವಣಿಗೆಯ ಕಥೆಗೆ ನಮ್ಮ ವಿನಮ್ರ ಕೊಡುಗೆ ಮುಂದುವರಿಯುತ್ತದೆ. ಜೈ ಹಿಂದ್ ಎಂದು ಅದಾನಿ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ. .

ಸಿಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಲು ಯಾವುದೇ ಆಧಾರಗಳಿಲ್ಲ ಎಂದು ಹೇಳಿದೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಯುಎಸ್ ಮೂಲದ ಶಾರ್ಟ್‌ ಸೆಲ್ಲರ್‌ ಹಿಂಡೆನ್‌ಬರ್ಗ್ ರೀಸರ್ಚ್‌ನ ಆರೋಪಗಳಿಗೆ ಸಂಬಂಧಿಸಿದ 24 ಪ್ರಕರಣಗಳಲ್ಲಿ 22 ಪ್ರಕರಣಗಳನ್ನು ತನಿಖೆ ಮಾಡಿದೆ. ಉಳಿದ ಎರಡು ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೆಬಿಗೆ ಮೂರು ತಿಂಗಳ ಕಾಲಾವಕಾಶ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net