More

    ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಗೌತಮ್ ಗಂಭೀರ್

    ನವದೆಹಲಿ: ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್​ ಗಂಭೀರ್​ ರಾಜಕೀಯದಿಂದ ನಿವೃತ್ತರಾಗುವುದಾಗಿ ಘೋಷಿಸಿದ್ದಾರೆ. ದೆಹಲಿ ಪೂರ್ವ ಲೋಕಸಭೆ ಕ್ಷೇತ್ರದ ಸಂಸದರಾಗಿರುವ ಗೌತಮ್​ ಗಂಭೀರ್​ ಬಿಜೆಪಿ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಗೌತಮ್ ಗಂಭೀರ್, ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವಿನಂತಿಸಿದ್ದಾರೆ.

    ಇದನ್ನೂ ಓದಿ: ಪಾಕ್​ ಪರ ಘೋಷಣೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; FSL ವರದಿಯಲ್ಲಿ ಸತ್ಯ ಬಹಿರಂಗ

    ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಜೀ ಅವರಿಗೆ ಮನವಿ ಮಾಡಿದ್ದೇನೆ. ಇದರಿಂದಾಗಿ ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ನಾನು ಗಮನಹರಿಸಬಹುದು. ನನಗೆ ಜನರ ಸೇವೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಷಾ ಅವರಿಗೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ಸಂಸದರಾಗಿದ್ದ ವೇಳೆ ಐಪಿಎಲ್​ ಮೆಂಟರ್​, ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೌತಮ್​ ಗಂಭೀರ್​ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ನಿಮ್ಮನ್ನು ಕಚೇರಿಗಿಂತ ಕ್ರಿಕೆಟ್​ ಫೀಲ್ಡ್​ನಲ್ಲೇ ನಾವು ಹೆಚ್ಚಾಗಿ ನೋಡಿದ್ಧೇವೆ ಎಂದು ಸಾರ್ವಜನಿಕರು ಹಾಗೂ ವಿಪಕ್ಷಗಳು ಟೀಕಿಸಿದ್ದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts