ISIS ಉಗ್ರರಿಂದ ಕ್ರಿಕೆಟಿಗ ಗೌತಮ್‌ ಗಂಭೀರ್​​ಗೆ ಜೀವ ಬೆದರಿಕೆ..gautam gambhir receives threat from isis

Gautam Gambhir
Published on

gautam gambhir receives threat from isis : ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಕಾಶ್ಮೀರದ ಐಸಿಸ್ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ ಕರೆ ಬಂದಿದೆ.

ಭಾರತದ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರಿಗೆ "ISIS-Kashmir" ಎಂಬ ಭಯೋತ್ಪಾದಕ ಗುಂಪು ಬೆದರಿಕೆ ಹಾಕಿದೆ. ಏಪ್ರಿಲ್ 22 ರಂದು ಗಂಭೀರ್ ಅವರಿಗೆ "IKillU" ಎಂಬ  ಸಂದೇಶವಿರುವ ಎರಡು ಇಮೇಲ್‌ಗಳು ಬಂದಿವೆ ಎಂದು ವರದಿಯಾಗಿದೆ. ಒಂದು ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಇಮೇಲ್ ಬಂದಿದೆ.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ವಿನಾಶಕಾರಿ ಭಯೋತ್ಪಾದಕ ದಾಳಿಯ ನಂತರ ಈ ಬೆದರಿಕೆಗಳು ಬಂದಿವೆ ಎನ್ನಲಾಗಿದೆ.

ಬೆದರಿಕೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು, ಗಂಭೀರ್ ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದರು. ಆತಂಕಕಾರಿ ಪರಿಸ್ಥಿತಿ ಇರುವುದರಿಂದ ಎಫ್‌ಐಆರ್ ದಾಖಲಿಸುವಂತೆ ವಿನಂತಿಯನ್ನು ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದರು ಎಂದು ಎಸ್‌ಎಚ್‌ಒ ರಾಜಿಂದರ್ ನಗರ ಪೊಲೀಸ್ ಠಾಣೆ ಮತ್ತು ಡಿಸಿಪಿ ಸೆಂಟ್ರಲ್ ದೆಹಲಿ ತಿಳಿಸಿದ್ದಾರೆ.

ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ನಂತರ 26 ನಾಗರಿಕರು ಸಾವನ್ನಪ್ಪಿದರು. ಈ ದಾಳಿಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ. ಗಂಭೀರ್ ಸ್ವತಃ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net