ಪ್ರಧಾನಿ ಮೋದಿಯನ್ನು ಕೊಂಡಾಡಿದ ಗಂಭೀರ್​ ಕಾಂಗ್ರೆಸ್​ಗೆ ನೀಡಿದ ಎಚ್ಚರಿಕೆಯ ಸಲಹೆ ಏನು?

Latest News

ದೇಶ ಆರ್ಥಿಕವಾಗಿ ಸಬಲವಾಗಲು ಸಹಕಾರಿ ಸಂಘಗಳ ಪಾತ್ರ ಮುಖ್ಯ

ವಿಜಯಪುರ: ಭಾರತ ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ ಸಬಲವಾಗಲು ಸಹಕಾರಿ ಸಂಘಗಳ ಪಾತ್ರ ಮುಖ್ಯವಾಗಿದೆ ಎಂದು ಆಹೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ...

ಒಂದು ತಿಂಗಳಲ್ಲಿ ರಾಜ್ಯದಲ್ಲಿ ಹೊಸ ಐಟಿ ನೀತಿ ಪ್ರಕಟ: ಇನ್​ಕ್ಯುಬೇಷನ್ ಕೇಂದ್ರಗಳ ಮೌಲ್ಯಮಾಪನಕ್ಕೆ ಸಿದ್ಧತೆ, ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಮಾಹಿತಿ

ಬೆಂಗಳೂರು: ಕೌಶಲ ಅಭಿವೃದ್ಧಿ, 2 ಮತ್ತು 3ನೇ ಹಂತದ ನಗರಗಳಲ್ಲಿ ಐಟಿ ಕ್ಷೇತ್ರದ ಅನುಷ್ಠಾನ ಅಂಶವನ್ನೊಳಗೊಂಡು ನೂತನ ಐಟಿ ನೀತಿಯನ್ನು ಇನ್ನೊಂದು ತಿಂಗಳಲ್ಲಿ...

ರಾಬಿನ್ ಉತ್ತಪ್ಪಗೆ ಕೆಕೆಆರ್ ಕೊಕ್: ಐಪಿಎಲ್ ಹರಾಜಿಗೆ ವೇದಿಕೆ ಸಿದ್ಧ, ಗರಿಷ್ಠ 12 ಆಟಗಾರರನ್ನು ಕೈಬಿಟ್ಟ ಆರ್​ಸಿಬಿ

ಬೆಂಗಳೂರು: ಐಪಿಎಲ್ 2020 ಹರಾಜು ಪ್ರಕ್ರಿಯೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗರಿಷ್ಠ 12 ಆಟಗಾರರನ್ನು ಬಿಟ್ಟಿದ್ದರೆ, ಸನ್​ರೈಸರ್ಸ್ ಹೈದರಾಬಾದ್ ತಂಡ ಕನಿಷ್ಠ...

ನಿಮಗಾಗಿ ಫೋಟೋ ಹಬ್ಬ

ಪುಟಾಣಿಗಳೇ, ನಿಮ್ಮ ಮುದ್ದು ಮುದ್ದಾದ ನಗುಮುಖವನ್ನು ಲಕ್ಷಾಂತರ ಜನ ನೋಡಿ ಖುಷಿಪಡುವ ಸಲುವಾಗಿ ‘ವಿಜಯವಾಣಿ’ ನಿಮಗೊಂದು ಒಳ್ಳೆಯ ಅವಕಾಶ ಕಲ್ಪಿಸಿದೆ. ಈ ಬಾರಿಯ...

ಸ್ಟಾರ್ ನಟರಿಗೆ ಕುಂಬ್ಳೆ ಕವನದ ಸ್ಪಿನ್

ಬೆಂಗಳೂರು: ಕನ್ನಡದ ಕವನಗಳನ್ನು ವಾಚಿಸುವ ಚಾಲೆಂಜ್ ಸಾಮಾಜಿಕ ಜಾಲತಾಣದಲ್ಲಿ ಸೌಂಡು ಮಾಡುತ್ತಿದೆ. ಹಲವು ಸೆಲೆಬ್ರಿಟಿಗಳು ಇದಕ್ಕೆ ಕೈ ಜೋಡಿಸುತ್ತಿದ್ದಾರೆ. ನಟರಾದ ಗಣೇಶ್, ಯಶ್,...

ನವದೆಹಲಿ: ಕ್ರಿಕೆಟ್​ ವೃತ್ತಿಯಲ್ಲಿ ಉತ್ತಮ ಇನ್ನಿಂಗ್ಸ್​ ಆಡಿ ಗಮನಾರ್ಹ ಸಾಧನೆ ಮಾಡಿ ವಿದಾಯ ಹೇಳಿರುವ ಗೌತಮ್​ ಗಂಭೀರ್​ ಅವರು ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್​ ಪ್ರಾರಂಭಿಸಿದ್ದಾರೆ. ಕ್ರಿಕೆಟ್​ನಲ್ಲಿ ಆರಂಭಿಕರಾಗಿ ಕಣಕ್ಕಿಳಿಯುವ ಮೂಲಕ ಎದುರಾಳಿಗಳಿಗೆ ಸೋಲಿನ ರುಚಿ ತೋರಿಸಿದ್ದ ಗಂಭೀರ್​ ರಾಜಕೀಯದಲ್ಲೂ ಅದನ್ನು ಮುಂದುವರಿಸಿದ್ದಾರೆ.

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಸೇರಿ ಪೂರ್ವ ದೆಹಲಿಯಿಂದ ಕಣಕ್ಕಿಳಿಯುವ ಮೂಲಕ ಮೊದಲ ಬಾರಿಗೆ ಗಂಭೀರ್ ಚುನಾವಣೆ ಎದುರಿಸಿದ್ದಾರೆ. ​ 6,96,156 ಮತಗಳನ್ನು ಗಳಿಸುವ ಮೂಲಕ 3,91,222 ಅಂತರದಲ್ಲಿ ಎದುರಾಳಿ ಕಾಂಗ್ರೆಸ್​ ಅಭ್ಯರ್ಥಿ ಅರವಿಂದರ್​ ಸಿಂಗ್​ ಲವ್ಲಿ(3,04,934) ಅವರಿಗೆ ಸೋಲುಣಿಸುವ ಮೂಲಕ ಮೊದಲ ಬಾರಿಗೆ ಸಂಸದರಾಗಿ ಸಂಸತ್ತಿಗೆ ಪ್ರವೇಶ ಪಡೆದಿದ್ದಾರೆ.

ಗೆಲುವಿನ ಖುಷಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಂಡಾಡಿರುವ ಗಂಭೀರ್​, ಕಾಂಗ್ರೆಸ್​ಗೆ ಸಲಹೆಯೊಂದನ್ನು ನೀಡಿದ್ದಾರೆ. ನನ್ನ ಮೇಲೆ ನಂಬಿಕೆ ಇಟ್ಟ ಜನರಿಗೆ ನನ್ನ ಧನ್ಯವಾದಗಳು. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಐದು ವರ್ಷಗಳಲ್ಲಿ ನಿರ್ಣಾಯಕ ನಾಯಕತ್ವವನ್ನು ನೀಡಿದ್ದರ ಫಲವೇ ಈ ಫಲಿತಾಂಶ. ಯಾವಾಗ ಪ್ರಾಮಾಣಿಕತೆಯಿಂದ ಕಷ್ಟಪಟ್ಟು ದುಡಿದಾಗ ಏನಾಗುತ್ತದೆ ಎಂಬುದನ್ನು ಈ ಫಲಿತಾಂಶ ತೋರಿಸುತ್ತಿದೆ ಎಂದು ಮೋದಿಯ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಚುನಾವಣೆಯಲ್ಲಿ ಜನರು ಋಣಾತ್ಮಕ ರಾಜಕಾರಣವನ್ನು ನಿರಾಕರಿಸಿದ್ದಾರೆ. ಎಲ್ಲ ಸಮಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದರ ಬದಲಾಗಿ ಎಲ್ಲಿ ತಪ್ಪಾಗಿದೆ ಎಂಬುದನ್ನು ಕಾಂಗ್ರೆಸ್​ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಎಲ್ಲಿಯವರೆಗೂ ಕಾಂಗ್ರೆಸ್​ನವರು ಆತ್ಮಾವಲೋಕನ ಮಾಡಿಕೊಳ್ಳುವುದಿಲ್ಲವೋ ಅಲ್ಲಿಯವರೆಗೂ ಕಾಂಗ್ರೆಸ್​ ಅಧಿಕಾರಕ್ಕೆ ಬರುವುದಿಲ್ಲ. ಬೇಕಾದರೆ ಇದನ್ನು ನಾನು ಬರೆದುಕೊಡುತ್ತೇನೆ ಎಂದು ಹೇಳಿದರು.

ಪ್ರಧಾನಿ ಮೋದಿ ರೀತಿಯಲ್ಲೇ ಹೆಚ್ಚು ಸಮರ್ಪಣಾ ಮನೋಭಾವದಿಂದ ಎನ್​​ಡಿಎದಲ್ಲಿ ಸರ್ಕಾರದಲ್ಲಿ ಮೊದಲ ಬಾರಿಗೆ ಕಾರ್ಯನಿರ್ವಹಿಸುತ್ತೇನೆ ಎಂದ ಗಂಭೀರ್​, ವಿಶ್ವಕಪ್​ ಕುರಿತು ಮಾತನಾಡಿ, ತಂಡಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸುತ್ತೇನೆ. ವಿಶ್ವಕಪ್​ ಗೆಲ್ಲುವುದಕ್ಕಿಂತ ಹೆಚ್ಚಿನ ಸಂತೋಷ ಕ್ರಿಕೆಟ್​ನಲ್ಲಿ ಮತ್ತೊಂದಿಲ್ಲ. 2011ರಲ್ಲಿ ನಾವು ವಿಶ್ವಕಪ್​ ಗೆದ್ದಿದ್ದೆವು. ಈ ಬಾರಿಯು ಗೆಲ್ಲುವುದಕ್ಕೆ ಅವಕಾಶ ಇದೆ ಎಂದು ತಿಳಿಸಿದರು. (ಏಜೆನ್ಸೀಸ್​)

- Advertisement -

Stay connected

278,480FansLike
565FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...