More

    ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ಆಡದಿರುವುದಕ್ಕೆ ಕಾರಣ ಬಹಿರಂಗಪಡಿಸಿದ ಅನಿಲ್ ಕುಂಬ್ಳೆ

    ದುಬೈ: ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಐಪಿಎಲ್ 13ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೊದಲ 5 ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ ಬಳಿಕ ಕೊನೆಗೂ ಗುರುವಾರದ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಬೇಕಾಗಿತ್ತು. ಆದರೆ ಕಲುಷಿತ ಆಹಾರ ಸೇವನೆಯಿಂದಾಗಿ ಅವರಿಗೆ ಸನ್‌ರೈಸರ್ಸ್‌ ವಿರುದ್ಧದ ಮಹತ್ವದ ಪಂದ್ಯದಲ್ಲಿ ಆಡಲು ಸಾಧ್ಯವಾಗಲಿಲ್ಲ ಎಂದು ತಂಡದ ಕೋಚ್ ಅನಿಲ್ ಕುಂಬ್ಳೆ ಪಂಧ್ಯದ ವೇಳೆ ತಿಳಿಸಿದ್ದಾರೆ.

    ಪಂದ್ಯದ ವೇಳೆ ನೇರಪ್ರಸಾರ ವಾಹಿನಿಯ ಜತೆಗೆ ಮಾತನಾಡಿದ ಅನಿಲ್ ಕುಂಬ್ಳೆ, ‘ಕ್ರಿಸ್ ಗೇಲ್ ಇಂದಿನ ಪಂದ್ಯದಲ್ಲಿ ಆಡಬೇಕಾಗಿತ್ತು. ಆದರೆ ಅನಾರೋಗ್ಯದಿಂದಾಗಿ ಅವರಿಗೆ ಆಡಲು ಸಾಧ್ಯವಾಗಲಿಲ್ಲ. ಅವರು ಕಲುಷಿತ ಆಹಾರ (ಫುಡ್​ ಪಾಯ್ಸನ್​) ಸೇವನೆಯಿಂದಾಗಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ’ ಎಂದು ವೀಕ್ಷಕವಿವರಣೆಕಾರರರಿಗೆ ತಿಳಿಸಿದರು.

    ಐಪಿಎಲ್‌ನಲ್ಲಿ ಅತ್ಯಧಿಕ ಸಿಕ್ಸರ್ ಮತ್ತು ಶತಕ ಸಿಡಿಸಿದ ದಾಖಲೆ ಹೊಂದಿರುವ 41 ವರ್ಷದ ಕ್ರಿಸ್ ಗೇಲ್, ಹಾಲಿ ಟೂರ್ನಿಯಲ್ಲಿ ಇದುವರೆಗೆ ಒಂದೂ ಪಂದ್ಯವಾಡಿಲ್ಲ. ಒಂದು ವೇಳೆ ಅವರು ಕಣಕ್ಕಿಳಿದರೆ, ವಿದೇಶಿ ಕೋಟಾದ ಅನ್ವಯ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹೊರಗುಳಿಯಬೇಕಾಗಿತ್ತು. ಆದರೆ ಇದೀಗ ಮ್ಯಾಕ್ಸ್‌ವೆಲ್ ಮತ್ತೊಂದು ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಪ್ಲೇಆಫ್​ ಆಸೆ ಜೀವಂತ ಉಳಿಸಿಕೊಳ್ಳಲು ಹೋರಾಡುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಶೀಘ್ರದಲ್ಲೇ ಕ್ರಿಸ್ ಗೇಲ್‌ಗೆ ಆಡುವ ಅವಕಾಶ ಕಲ್ಪಿಸಲಿದೆ ಎಂದು ತಂಡದ ಬ್ಯಾಟಿಂಗ್ ಕೋಚ್ ವಾಸಿಂ ಜಾಫರ್ ಈ ಮುನ್ನ ಹೇಳಿದ್ದರು.

    ಫ್ರೆಂಚ್ ಓಪನ್‌ನಲ್ಲಿ ಡೇನಿಯಲ್ ಕಾಲಿನ್ಸ್ ಸೋಲಿಗೆ ಬಾಯ್‌ಫ್ರೆಂಡ್ ಕಾರಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts