More

    ಕೋವಿಡ್ ಎದುರಿಸಲು ಸಜ್ಜು

    ಕಾಗವಾಡ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದನುಸಾರ ತಾಲೂಕಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಹಸೀಲ್ದಾರ್ ರಾಜೇಶ ಬುರ್ಲಿ ಹೇಳಿದರು.

    ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಭೆ ಉದ್ದೇಶಿಸಿ ಮಾತನಾಡಿದರು. ಈಗಾಗಲೇ ಆರೋಗ್ಯ ಕೇಂದ್ರದಲ್ಲಿ 30 ಬೆಡ್‌ಗಳ ಕೋವಿಡ್ ವಿಭಾಗ ಹಾಗೂ 11 ಆಕ್ಸಿಜನ್ ಬೆಡ್ ಪ್ರಾರಂಭಿಸಲಾಗಿದೆ. ಅದಲ್ಲದೆ ಪಿಪಿಇ ಕಿಟ್, ಔಷಧ ದಾಸ್ತಾನು ಮಾಡಲಾಗಿದೆ. ತಾಲೂಕಿನ ಪ್ರತಿ ಗ್ರಾಮದಲ್ಲಿಯೂ ಆಯಾ ಗ್ರಾಪಂ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಮುಖಾಂತರ ಜಾಗೃತಿ ಮೂಡಿಸಲಾಗುವುದು. ಚಿಕ್ಕ ಮಕ್ಕಳು, ಗರ್ಭಿಣಿಯರು, ಬಾಣಂತಿಯರು, 60 ವರ್ಷ ಮೇಲ್ಪಟ್ಟವರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೆಮ್ಮು, ನೆಗಡಿ, ಜ್ವರದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಬೇಕು. ಭಯಪಡದೆ ಕೋವಿಡ್ ನಿಯಮಾವಳಿ ಪಾಲಿಸಬೇಕು ಎಂದು ಸಲಹೆ ನೀಡಿದರು.

    ಸಿಡಿಪಿಒ ಸಂಜೀವಕುಮಾರ ಸದಲಗೆ, ಬಿಇಒ ಎಂ.ಆರ್. ಮುಂಜೆ, ತಾಪಂ ಇಒ ಪ್ರವೀಣ ಪಾಟೀಲ, ಡಾ.ಪುಷ್ಪಲತಾ ಸುಣ್ಣದಕಲ್ಲ, ಡಾ.ಎಸ್.ಎಸ್. ಕೋಳಿ, ಡಾ.ಸೌಮ್ಯಾ ಪಾಟೀಲ, ಡಾ.ರಾಘವೇಂದ್ರ ಲೋಕೂರ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ಸೂರಜ್ ಕುಂಬಾರ, ಜಾವೀದ್ ಮುಜಾವರ್, ರವಿ ಸೋಲಾಟೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts