More

    ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್​ಗೆ ಸೇರ್ಪಡೆ

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ಸಜ್ಜಾಗಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಸಿನಿಮಾ ಸ್ಟಾರ್‌ ಗಳ ಮೂಲಕ ಪ್ರಚಾರದ ಭರಾಟೆಯನ್ನ ಹೆಚ್ಚಿಸಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್​ ಅವರ ಧರ್ಮಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.

    ಇದನ್ನೂ ಓದಿ: ಬದನೆಕಾಯಿ ಬೆಳೆಯಲು ಇನ್ಫೋಸಿಸ್ ಉದ್ಯೋಗ ತೊರೆದು ರೈತನಾದ ಟೆಕ್ಕಿ; 40,000 ಸಾವಿರ ರೂ. ಸಂಬಳಕ್ಕಿಂತ ದುಪ್ಪಟ್ಟು ಹಣ ಗಳಿಕೆ!

    ನಗರದ ಕೆಪಿಸಿಸಿ ಕಚೇರಿಯಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ದೊಡ್ಮನೆ ಕುಟುಂಬದ ಹಿರಿಯ ಸೊಸೆ, ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ.
    ಮಾಜಿ ಶಾಸಕ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಎಐಸಿಸಿ‌ ವಕ್ತಾರ ಗೌರವ್ ವಲ್ಲಭ್ ಹಾಗೂ ಹೆಬ್ಬಾಳ ಶಾಸಕ ಬೈರತಿ ಸುರೇಶ್ ಕೂಡ ಭಾಗಿಯಾಗಿದ್ದಾರೆ. ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಶಾಸಕ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

    ಇದನ್ನೂ ಓದಿ: ಪೋರ್ನ್​ ಸ್ಟಾರ್​ ಆಗಿರುವುದು ದೇವರ ಇಚ್ಛೆ! ಶಿಕ್ಷಕಿ ಹುದ್ದೆ ತೊರೆದು ನೀಲಿತಾರೆಯಾದ ಟಿಲಿಯಾ ಬೋಲ್ಡ್​ ಹೇಳಿಕೆ

    ಗೀತಾ ಶಿವರಾಜ್​ಕುಮಾರ್​ ಅವರು 2014 ರಲ್ಲಿ ಜೆಡಿಎಸ್​ ಪಕ್ಷದಿಂದ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಫರ್ಧೆ ಮಾಡಿದ್ದರು. ಬಿಎಸ್​ವೈ ವಿರುದ್ಧ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು. ಆಗ ಸಹೋದರ ಮಧು ಬಂಗಾರಪ್ಪ ಅವರು ಜೆಡಿಎಸ್​ ಪಕ್ಷದಲ್ಲಿದ್ದರು. ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಮಧು ಬಂಗಾರಪ್ಪ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇದೀಗ ಸಹೋದರ ನಡೆಯನ್ನೇ ಹಿಂಬಾಲಿಸಿರುವ ಗೀತಾ ಶಿವರಾಜ್​ಕುಮಾರ್​ ಕಾಂಗ್ರೆಸ್​ ಸೇರಿದ್ದಾರೆ.

    ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿದ 60 ವರ್ಷದ ವ್ಯಕ್ತಿ ಅರೆಸ್ಟ್​​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts