ಬೆಂಗಳೂರಿನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಜಿಲೆಟಿನ್ ಕಡ್ಡಿ, ಡಿಟೊನೇಟರ್ ಸ್ಪೋಟಕಗಳು ಪತ್ತೆ| bengaluru

Untitled design
Published on

ಬೆಂಗಳೂರು; ಸಿಲಿಕಾನ್‌ ಸಿಟಿಯ ಕಲಾಸಿಪಾಳ್ಯ ಬಿಎಂಟಿಸಿ ಬಸ್ ನಿಲ್ದಾಣದ ಶೌಚಾಲಯದ ಬಳಿ ಇಂದು (23) ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ನಲ್ಲಿ ಆರು ಜಿಲೆಟಿನ್ ಕಡ್ಡಿಗಳು ಮತ್ತು ಹಲವಾರು ಡಿಟೋನೇಟರ್‌ಗಳು ಪತ್ತೆಯಾಗಿದ್ದು, ಗಂಭೀರ ಭದ್ರತಾ ಕಳವಳವನ್ನು ವ್ಯಕ್ತಪಡಿಸಿದೆ.

ವಿಚಾರ ತಿಳಿದ ಕೂಡಲೇ ಕಲಾಸಿಪಾಳ್ಯ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಜತೆಗೆ ಬಾಂಬ್ ತಪಾಸಣೆ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಕರೆಸಿ ತಪಾಸಣೆ ನಡೆಸಿದ್ದಾರೆ. ಯಾರು ಈ ಸ್ಪೋಟಕಗಳನ್ನು ತಂದು ಇಟ್ಟಿದ್ದಾರೆ ಎಂಬುದನ್ನು ತಿಳಿಯಲು ತನಿಖೆ ಮುಂದುವರೆದಿದೆ. ಬಸ್ ನಿಲ್ದಾಣದ ಎಲ್ಲ ಮೂಲೆ ಮೂಲೆಗಳನ್ನೂ ತಪಾಸಣೆ ಮಾಡಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಸ್ಪೋಟಕಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ. ಬಿಎಂಟಿಸಿ ಬಸ್ ನಿಲ್ದಾಣದಲ್ಲೂ ಭದ್ರತಾ ಕ್ರಮವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಏರ್ಪಡಿಸಲಾಗಿದೆ.

(ಏಜೆನ್ಸೀಸ್)

ಈ ಬಗ್ಗೆ ಕಲಾಸಿಪಾಳ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಶಂಕಿತ ಸ್ಪೋಟಕಗಳು ಎಲ್ಲಿ ಇಡಲಾಯಿತು, ಯಾರು ಇಟ್ಟಿದ್ದರು ಎಂಬ ಬಗ್ಗೆ ಶೀಘ್ರವೇ ಮಾಹಿತಿ ಬಹಿರಂಗಗೊಳ್ಳುವ ನಿರೀಕ್ಷೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net