More

    ಲಿಂಗ ತಾರತಮ್ಯ ತೊಡೆದು ಹಾಕಿದ್ದ ಬಸವಣ್ಣ

    ಗೊರೇಬಾಳ: ಬಸವಣ್ಣ 900 ವರ್ಷಗಳ ಮುಂಚೆಯೇ ಸಮಾಜದಲ್ಲಿ ಲಿಂಗ ತಾರತಮ್ಯ ತಡೆದು ಸಮಾನತೆ ಸಾರಿದ್ದರು. ಮಹಿಳೆಯರು ಕೂಡ ಬುದ್ಧಿವಂತರು ಎಂದು ಅನುಭವ ಮಂಟಪದಲ್ಲಿ ಸ್ಥಾನ ಕಲ್ಪಿಸಿದ್ದರು ಎಂದು ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ತಿಳಿಸಿದರು.

    ಗ್ರಾಮದಲ್ಲಿ ತವರಿನ ತೇರು, ಬಸವ ಪುರಾಣ ಮಹಾಮಂಗಲ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಪ್ರವಚನಕಾರ ಹಂದಿಗುಂದ ಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ಒಳಬಳ್ಳಾರಿ ವಿರಕ್ತ ಮಠದ ಸಿದ್ಧಲಿಂಗ ಸ್ವಾಮೀಜಿ ಸೂಚನೆಯಂತೆ ಆಯೋಜಿಸಿದ್ದ ಬಸವ ಪುರಾಣ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಶರಣರ ಜೀವನಾಮೃತವನ್ನು ಜೀವನದುದ್ದಕ್ಕೂ ಪಾಲಿಸಬೇಕು ಎಂದರು.

    ಮುಂಡರಗಿ ಅನ್ನದಾನೇಶ್ವರ ಸಂಸ್ಥಾನಮಠದ ಡಾ.ಅನ್ನದಾನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಒಳಬಳ್ಳಾರಿ ವಿರಕ್ತ ಮಠದ ಸಿದ್ಧಲಿಂಗ ಸ್ವಾಮೀಜಿ, ಬಸವಲಿಂಗ ಶಿವಾಚಾರ್ಯ ಸ್ವಾಮೀಜಿ, ಅಡವೀಶ್ವರ ಮಠದ ಶಿವಲಿಂಗ ಸ್ವಾಮೀಜಿ, ಹಾಲ್ವಿ ಚರಣಗಿರಿ ಸಂಸ್ಥಾನ ಮಠದ ಮಹಾಂತ ಸ್ವಾಮೀಜಿ, ಗುರುಮೂರ್ತಿ ಶಿವಾಚಾರ್ಯರು, ಮಾನ್ವಿ ವಿರೂಪಾಕ್ಷ ಶಿವಾಚಾರ್ಯರು, ಬೈಲಹೊಂಗಲದ ಪ್ರಭುನೀಲಕಂಠ ಸ್ವಾಮೀಜಿ, ಅಭಿನವ ಚನ್ನಬಸವ ಸ್ವಾಮೀಜಿ, ಸಿರಗುಪ್ಪದ ಬಸವಭೂಷಣ ಸ್ವಾಮೀಜಿ, ನಿಲಕಂಠಯ್ಯ ತಾತ, ಶಿವಬಸವ ದೇವರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts