More

    ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ

    ಶಿವಮೊಗ್ಗ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಏರ್ಪಡಿಸಲಾಗಿದೆ. ಇದರಲ್ಲಿ ಅಂದಾಜು ಎರಡು ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.

    ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು. ಸಮ್ಮೇಳನದಲ್ಲಿ ಸರ್ಕಾರಿ ನೌಕರರ ವೃತ್ತಿಗೆ ಪೂರಕವಾಗಿರುವ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರವನ್ನೂ ಏರ್ಪಡಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಬೆಳಗ್ಗೆ 11ಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದು ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಸತೀಶ ಜಾರಕಿಹೊಳಿ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಡಾ. ಎಚ್.ಸಿ.ಮಹದೇವಪ್ಪ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಕೆ.ಎನ್.ರಾಜಣ್ಣ, ಕೆ.ಎಚ್.ಮುನಿಯಪ್ಪ, ಬಿ.ಎಸ್.ಸುರೇಶ್ ಮುಂತಾದವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.
    ಸಮ್ಮೇಳನದಲ್ಲಿ ಭಾಗವಹಿಸುವ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಸರ್ಕಾರಿ ನೌಕರರಿಗೆ ಒಂದು ದಿನ ಒಒಡಿ ಸೌಲಭ್ಯ ಒದಗಿಸಲಾಗಿದೆ. ಉಳಿದ ಜಿಲ್ಲೆಗಳ ನೌಕರರಿಗೆ ಎರಡು ದಿನ ಒಒಡಿ ಸೌಲಭ್ಯವಿದೆ. ಶಿವಮೊಗ್ಗ ಜಿಲ್ಲೆಯಿಂದ ಸುಮಾರು ಐದು ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದು ಎಲ್ಲರಿಗೂ ಬಸ್ ಸೌಲಭ್ಯ ಒದಗಿಸಲಾಗುವುದು ಎಂದರು.
    ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್, ಜಿಲ್ಲಾ ಸಂಘದ ಪದಾಧಿಕಾರಿಗಳಾದ ಡಿ.ಟಿ.ಕೃಷ್ಣಮೂರ್ತಿ, ನರಸಿಂಹಮೂರ್ತಿ, ಪ್ರಸನ್ನ, ಆರ್.ಪಾಪಣ್ಣ, ಮಾರುತಿ ಇತರರಿದ್ದರು.
    ನೌಕರರಿಗೆ ಕಾರ್ಯಾಗಾರ:ನೌಕರರ ಕಾರ್ಯದಕ್ಷತೆ ಎಂಬ ವಿಷಯದ ಕುರಿತು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮಾತನಾಡಲಿದ್ದಾರೆ. ನೌಕರರ ಆರೋಗ್ಯ ಮತ್ತು ಒತ್ತಡ ನಿರ್ವಹಣೆ ಬಗ್ಗೆ ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಮಾರ್ಗದರ್ಶನ ಮಾಡಲಿದ್ದಾರೆ. ಆಡಳಿತದಲ್ಲಿ ಸರ್ಕಾರಿ ನೌಕರರ ಭಾಗವಹಿಸುವಿಕೆ ಬಗ್ಗೆ ಉನ್ನತ ಅಧಿಕಾರಿಗಳು ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಸರ್ಕಾರಿ ನೌಕರರ ಸಂಘ ನಡೆದು ಬಂದ ದಾರಿ ಹಾಗೂ ಸಾಧನೆಗಳ ಬಗ್ಗೆ ನೌಕರರ ಸೇನೆ ಸಾಕ್ಷೃಚಿತ್ರ ಪ್ರದರ್ಶನವಿದೆ.
    3 ಬೇಡಿಕೆಗಳ ಮಂಡನೆ:ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. 7ನೇ ವೇತನ ಆಯೋಗದ ವರದಿ ಅನುಷ್ಠಾನ ಮಾಡಬೇಕು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಬೇಕು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts