More

    ಅಭಿವೃದ್ಧಿ ಕಾರ್ಯ ನೋಡಿ ಮತ ನೀಡಿ: ಜಯಪ್ರಕಾಶ್​ ಹೆಗ್ಡೆ

    ಉಡುಪಿ: ಜನಪ್ರತಿನಿಧಿಗಳಿಗೆ ಮತ ನೀಡುವಾಗ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ಕೊಡಬೇಕು. ಕಳೆದ ನಾಲ್ಕು ದಶಕಗಳಿಂದ ಕರಾವಳಿಯ ಅಭಿವೃದ್ಧಿಗಾಗಿ ನನ್ನ ಕಾರ್ಯವ್ಯಾಪ್ತಿಯಲ್ಲಿ, ಕಾನೂನಿನ ಚೌಕಟ್ಟಿನಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದೇನೆ. ಉಡುಪಿ ಪ್ರಜ್ಞಾವಂತ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆಂಬುದು ಸ್ಪಷ್ಟವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಕರ್ತವ್ಯ ನಿಭಾಯಿಸಲು ಮತ್ತೊಮ್ಮೆ ಅವಕಾಶ ಒದಗಿಸಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಕೆ. ಜಯಪ್ರಕಾಶ್​ ಹೆಗ್ಡೆ ಅವರು ಹೇಳಿದರು.

    ಉಡುಪಿ ವಿವಿಧ ಕಡೆಗಳಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು. ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಜನಪ್ರತಿನಿಧಿಯ ಕರ್ತವ್ಯ. ಕ್ಷೇತ್ರದಲ್ಲಿ ಕೆಲಸಗಳನ್ನು ಮಾಡದಿದ್ದಾಗ ಪ್ರಶ್ನಿಸುವ ಹಕ್ಕು ಮತದಾರರಿಗಿರುತ್ತದೆ. ಸಮರ್ಥರಾದವರನ್ನು ಆಯ್ಕೆ ಮಾಡುವುದರಿಂದ ಕ್ಷೇತ್ರ ಅಭಿವೃದ್ಧಿ ಸಾಧ್ಯ. ಚುನಾವಣೆಯಲ್ಲಿ ಗೆದ್ದು ಮತ್ತೆ ಆ ಕ್ಷೇತ್ರಕ್ಕೆ ಕಾಲಿಡದಿದ್ದರೆ ಜನರು ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಹೇಳಿಕೊಳ್ಳುವ ಅಭಿವೃದ್ಧಿಯ ಕೆಲಸಗಳು ಇಲ್ಲದಿದ್ದಾಗ ಬೇರೆಯವರ ಹೆಸರಿನಲ್ಲಿ ಮತ ಕೇಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ ಎಂದು ಹೇಳಿದರು.

    ಕಾಂಗ್ರೆಸ್​ ಸರಕಾರ ನೀಡಿರುವ ಐದು ಗ್ಯಾರೆಂಟಿ ಯೋಜನೆಗಳ ಬಗ್ಗೆ ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಜನಸಾಮಾನ್ಯರ ಬದುಕಿಗೆ ಸ್ಪಂದಿಸಿ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಒದಗಿದುವುದು ಕಾಂಗ್ರೆಸ್​ನ ಗುರಿಯಾಗಿದೆ ಎಂದು ಹೆಗ್ಡೆ ಹೇಳಿದರು.

    ಕಾಂಗ್ರೆಸ್​ ಮುಖಂಡ ಪ್ರಸಾದ್​ ಕಾಂಚನ್​ ಮಾತನಾಡಿ, ಜಯಪ್ರಕಾಶ್​ ಹೆಗ್ಡೆ ಸೋಲು-&ಗೆಲುವು ಲೆಕ್ಕಿಸದೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದವರು. ಈ ಕಾರಣಕ್ಕಾಗಿ ಚಿಕ್ಕಮಗಳೂರು ಮತ್ತು ಉಡುಪಿ ಕ್ಷೇತ್ರದ ಜನ ಅವರ ಮೇಲೆ ಅಪಾರ ಭರವಸೆ ಇಟ್ಟಿದ್ದಾರೆ. ಮತದಾನ ಮಾಡುವಾಗ ಹೆಗ್ಡೆ ಅವರ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿಕೊಳ್ಳಬೇಕಾದ ಅಗತ್ಯವಿದೆ. ಕರಾವಳಿಯ ಮೀನುಗಾರರ ಬದುಕಿಗೆ ಸದಾ ಸ್ಪಂದಿಸುತ್ತಿದ್ದಾರೆ ಎಂದರು.

    ಜಿಲ್ಲಾಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ. ಗೂರ್​, ಉಡುಪಿ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ರಮೇಶ್​ ಕಾಂಚನ್​ ಮೊದಲಾದವರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts