ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಜೆಪಿ ಹೆಗ್ಡೆ

IMG-20240420-WA0004
Published on

ಉಡುಪಿ: ಸರ್ಕಾರದಿಂದ ಜಾರಿಗೆ ತಂದಿರುವ ಆರೋಗ್ಯ ವಿಮಾ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಮಾನ್ಯ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದನ್ನು ಸರಳೀಕರಣಗೊಳಿಸುವ ಕೆಲಸವಾಗಬೇಕು. ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು ಎಂದು ಉಡುಪಿ&-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಕೆ.ಜಯಪ್ರಕಾಶ್​ ಹೆಗ್ಡೆ ಅಭಿಪ್ರಾಯಪಟ್ಟರು.


ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹರಿಹರದ ಹಫ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಆರೋಗ್ಯ ಸಮಸ್ಯೆ ಇರುವವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾದಲ್ಲಿ ಸರ್ಕಾರಿ ಆಸ್ಪತ್ರೆಯಿಂದ ಶಿಫಾರಸು ಪತ್ರ ಪಡೆದುಕೊಂಡು ತೆರಳಬೇಕು. ಹೆಚ್ಚಿನ ಸಂದರ್ಭದಲ್ಲಿ ಬೆಡ್​ ದೊರೆಯುವುದೇ ಕಷ್ಟ. ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ಲಕ್ಷಾಂತರ ರೂ. ಸಾಲ ಮಾಡಬೇಕಾದ ಅನಿವಾರ್ಯತೆಗಳು ನಿಮಾರ್ಣವಾಗುತ್ತದೆ. ಈ ಎಲ್ಲಾ ತಾಪತ್ರಯಗಳ ನಿವಾರಣೆಗೆ ಸರ್ಕಾರದಿಂದಲೇ ಸರಳಿಕೃತ ಆರೋಗ್ಯ ಕಾರ್ಡ್​ ವಿತರಣೆಯಾಗಬೇಕು. ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗಳ ನಿಮಾರ್ಣವಾಗಬೇಕು. ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ನಮ್ಮ ಮೂಲಭೂತ ಆದ್ಯತೆಯಾಗುವ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ಜಾರಿಗೆ ಬರಬೇಕು ಎಂದರು. ಶಾಸಕಿ ನಯನಾ ಮೋಟಮ್ಮ, ಮಾಜಿ ಶಾಸಕ ಕುಮಾರಸ್ವಾಮಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net