ಪಡುಕುಡೂರು ಹಾಲು ಉತ್ಪಾದಕರ ಮಹಾಸಭೆ

hbr_Milk producers
Published on

ಹೆಬ್ರಿ: ಪಡುಕುಡೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ವಿಸ್ತರಣಾಧಿಕಾರಿ ವಿಜಯ ಕುಮಾರ್ ಲವಣ ಮಿಶ್ರಣ, ವಿಮೆ ಹಾಗೂ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ತಿಳಿಸಿದರು.

ಸಂಘದ ಅಧ್ಯಕ್ಷ ಜಗದೀಶ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಾರದಾ ಚಂದ್ರ ಶೆಟ್ಟಿ ವರದಿ ಮಂಡಿಸಿದರು. ಉಪಾಧ್ಯಕ್ಷ ಅಶೋಕ್ ಎಂ.ಶೆಟ್ಟಿ, ನಿರ್ದೇಶಕರಾದ ಹೃದಯ ಕುಮಾರ್ ಶೆಟ್ಟಿ, ರವೀಂದ್ರ ಶೆಟ್ಟಿ, ದಿವಾಕರ ಶೆಟ್ಟಿ, ಸುಕೇಶ ಶೆಟ್ಟಿ, ಸುಲೋಚನಾ ಶೆಟ್ಟಿ, ಸುಕನ್ಯ ಶೆಟ್ಟಿ, ಸಂತೋಷ ನಾಯ್ಕ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net