ಜೂನ್ 1ರಿಂದ 15ರವರೆಗೆ ಸರ್ಕಾರಿ ಸಿಬ್ಬಂದಿಯ ಸಾರ್ವತ್ರಿಕ ವರ್ಗಾವಣೆ

Govt
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಈ ವರ್ಷ ಜೂನ್ 1ರಿಂದ 15ರವರೆಗೆ ರಾಜ್ಯ ಸರ್ಕಾರದ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ನಡೆಸಲು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಒಟ್ಟಾರೆ ಸಿಬ್ಬಂದಿ ಬಲದ ಶೇಕಡಾ 6ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದು ಗ್ರೂಪ್ ಎ, ಬಿ, ಸಿ ಮತ್ತು ಡಿ ವರ್ಗದ ಸಿಬ್ಬಂದಿಗಳೆಲ್ಲರಿಗೂ ಅನ್ವಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net