ಕೂಡ್ಲಿಗಿ: ಬ್ರಿಟಿಷರ ದಾಸ್ಯದಿಂದ ಬಿಡಿಸಿ, ಸ್ವಾತಂತ್ರ್ಯ ತಂದು ಕೊಟ್ಟ ಅಸಂಖ್ಯಾತ ದೇಶಪ್ರೇಮಿಗಳ ಸ್ಮರಣೆ ಮಾಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ತಹಸೀಲ್ದಾರ್ ಎಂ.ರೇಣುಕಾ ಹೇಳಿದರು.
ಇದನ್ನೂ ಓದಿ: ಒಗ್ಗಟ್ಟಿನ ಸಂದೇಶ ರವಾನಿಸಿ
ಪಪಂ ಕಚೇರಿ ಆವರಣದಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅನೇಕ ವೀರ ಮಹನೀಯರು ಪ್ರಾಣವನ್ನೆ ಪಣಕ್ಕಿಟ್ಟು ಹೋರಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸ್ಮರಣೆ ಅನುಕರಣೀಯ ಆದ್ದರಿಂದ ಅವರ ಸಹಾಸಗಾಥೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ. ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರ ಬೋಸ್ ಲಕ್ಷಾಂತರ ದೇಶ ಪ್ರೇಮಿಗಳ ಫಲದಿಂದ ನೆಮ್ಮದಿ ಬದುಕು ಕಟ್ಟಿಕೊಂಡಿದ್ದೆವೆ.
ಆದ್ದರಿಂದ ಈ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಎಲ್ಲರೂ ಮನೆಗಳಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ಧ್ವಜ ಹಾರಿಸಿ ಸ್ವಾತಂತ್ರ್ಯ ದಿನವನ್ನು ಹಬ್ಬದಂತೆ ಆಚರಿಸಬೇಕು ಎಂದರು.
ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ರಾಷ್ಟ್ರ ಧ್ವಜವನ್ನು ಅತ್ಯಂತ ಗೌರವದಿಂದ ಹಾರಿಸಿ ವಂದನೆ ಸಲ್ಲಿಸುವಂತೆ ಮನವಿ ಮಾಡಿದರು. ಪಪಂ ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ಗ್ರೇಡ್-2 ತಹಸೀಲ್ದಾರ್ ನೇತ್ರಾವತಿ, ಶಿರಸ್ತೆದಾರ ಎಸ್.ಚಂದ್ರಶೇಖರ, ಶೇಕ್ಷಾವಲಿ, ಎಸ್.ವೆಂಕಟೇಶ್ ಇದ್ದರು.