ಚಳುವಳಿಗೆ ಮಹನೀಯರ ಕೊಡುಗೆ ಅಪಾರ

kundapura
ಕುಂದಾಪುರದ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತ ಕುಂದಾಪುರದ ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ. ಪುಷ್ಪನಮನ ಸಲ್ಲಿಸಿದರು
Published on

ಕುಂದಾಪುರ: ಸ್ವಾತಂತ್ರೃ ಚಳುವಳಿಗೆ ಮಹನೀಯರ ಕೊಡುಗೆ ಸ್ಮರಿಸಬೇಕು. ಹೋರಾಟಗಾರರ ತ್ಯಾಗ, ಮಹತ್ವ ಅರಿತಿರಬೇಕು ಎಂದು ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ. ಹೇಳಿದರು.
ಕುಂದಾಪುರದ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತ ಕುಂದಾಪುರ ಆಶ್ರಯದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗಂಗೊಳ್ಳಿ ಎಸ್‌ಐ ಬಸವರಾಜ ಕನಶೆಟ್ಟಿ ನೇತೃತ್ವದಲ್ಲಿ ಪೊಲೀಸ್, ಪುರಸಭೆ ಪೌರಕಾರ್ಮಿಕರು, ಎನ್‌ಸಿಸಿ, ಸೇವಾದಳ, ಸ್ಕೌಟ್ಸ್ ಗೈಡ್ಸ್, ಬ್ಯಾಂಡ್ ತಂಡದಿಂದ ಪಥಸಂಚಲನ ನಡೆಯಿತು. ಅಂಗವಿಕಲ ವಿದ್ಯಾರ್ಥಿಗಳಿಗೆ ಹಾಗೂ ಅಂಗವಿಕಲ ಸ್ವ ಉದ್ಯೋಗಿಗಳಿಗೆ ಶ್ರವಣ ಸಾಧನ, ಹೊಲಿಗೆ ಯಂತ್ರ ವಿತರಿಸಲಾಯಿತು.
ಶಾಸಕ ಕಿರಣ್ ಕೊಡ್ಗಿ, ತಹಸೀಲ್ದಾರ್ ಶೋಭಾಲಕ್ಷ್ಮೀ, ಡಿವೈಎಸ್‌ಪಿ ಬೆಳ್ಳಿಯಪ್ಪ ಕೆ.ಯು., ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್ ಕೆ., ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಸುಮಲತಾ ಆರೂರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ರೂಪಾ ಮಾಡ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ನಿತೇಶ್ ಕೆ.ಜೆ., ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಕೋಟ್ಯಾನ್, ತಾಪಂ ಮ್ಯಾನೇಜರ್ ರಾಮಚಂದ್ರ ಮಯ್ಯ, ಪುರಸಭೆ ಮುಖ್ಯಾಧಿಕಾರಿ ಆನಂದ ಜೆ. ಮೊದಲಾದವರು ಇದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಮೈಕೆಲ್ ಫುರ್ಟಾಡೊ ಸ್ಯಾಕ್ಸೊಫೋನ್‌ನಲ್ಲಿ ವಂದೇ ಮಾತರಂ ನುಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net