

ಉಡುಪಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ವತಿಯಿಂದ ಮಾಜಿ ರಕ್ಷಣಾ ಸಚಿವ ಚಾರ್ಜ್ ಫೆರ್ನಾಂಡಿಸ್ ಸಂಸ್ಮರಣಾರ್ಥ ರಾಷ್ಟ್ರೀಯ ಪ್ರಶಸ್ತಿಯನ್ನು ಸವೋರ್ಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶ, ಮಾಜಿ ಲೋಕಾಯುಕ್ತ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
8ರಂದು ಪ್ರಶಸ್ತಿ ಪ್ರದಾನ
ಜೂನ್ 8ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಕಲ್ಸಂಕದಲ್ಲಿರುವ ಹೊಟೇಲ್ ಓಷಿಯನ್ ಪರ್ಲ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಕಾನೂನು ಸಚಿವ ಎಚ್.ಕೆ. ಪಾಟೀಲ್, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ. ಬ್ರಜೇಶ್ ಚೌಟ, ವಿಪ ಸದಸ್ಯರಾದ ಐವನ್ ಡಿಸೋಜಾ, ಎಸ್.ಎಲ್.ಭೋಜೆ ಗೌಡ, ಶಾಸಕ ಯಶಪಾಲ ಸುವರ್ಣ, ಬಹುಭಾಷಾ ಚಲನಚಿತ್ರ ನಟರಾದ ಸುಮನ್ ತಲ್ವಾರ್ ಪೂಜಾರಿ, ಮಾಜಿ ಎಂಎಲ್ಸಿ ಕ್ಯಾ. ಗಣೇಶ್ ಕಾರ್ಣಿಕ್ ಮೊದಲಾದವರು ಮುಖ್ಯ ಅತಿಥಿಗಳಾಗಿರುವರು. ಸಮಿತಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.