More

    31 ರೊಳಗಾಗಿ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ

    ಬಳ್ಳಾರಿ: ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಸ್.ಬಿ.ಬೋಗಿ ತಿಳಿಸಿದ್ದಾರೆ.

    ಪ್ರಕೃತಿ ವಿಕೋಪಗಳು/ಹವಾಮಾನ ವೈಪರೀತ್ಯಗಳಾದ ಅತಿವೃಷ್ಠಿ, ಅನಾವೃಷ್ಠಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಢಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮ ಪಂಚಾಯಿತಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ನೆರವಾಗುವುದು ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆ ಮುಖ್ಯ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರಗುಪ್ಪ, ಸಂಡೂರು ತಾಲೂಕುಗಳ ಎಲ್ಲ ಗ್ರಾಮ ಪಂಚಾಯಿತಿಗಳು ಹಸಿ ಮೆಣಸಿನಕಾಯಿ ಬೆಳೆಯುವ ಪ್ರದೇಶಗಳಾಗಿದ್ದು, ವಿಮೆಗೆ ಒಳಪಡುತ್ತವೆ. ರೈತರು ಪಾವತಿಸಬೇಕಾದ ವಿಮಾ ಕಂತಿನ ದರ 3550 ರೂ. ಆಗಿದೆ.
    ಇನ್ನು ದಾಳಿಂಬೆ ಬೆಳೆಯುವ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ 6350 ರೂ. (ಪ್ರತಿ ಹೆಕ್ಟೇರ್‌ಗೆ) ಆಗಿರುತ್ತದೆ. ರೈತರು ಅಗತ್ಯ ದಾಖಲೆಗಳೊಂದಿಗೆ ಎರಡು ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಲು ಜು.31 ಕೊನೆಯ ದಿನವಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ.9480257282, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ಜಿಪಂ) ದೂ:08395-260389 ಹಾಗೂ ಮೊ.9740934208, ಕಂಪ್ಲಿ ಮತ್ತು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ಜಿಪಂ) ದೂ:08396 -222066 ಹಾಗೂ ಮೊ.9448910277 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts