More

    ಕಾಲಕಾಲಕ್ಕೆ ಹಿಮೋಗ್ಲೋಬಿನ್ ತಪಾಸಣೆ ಮಾಡಿಸಿಕೊಳ್ಳಿ

    ಸಾಗರ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಆದರೆ ರಕ್ತದಾನದ ವಿಷಯ ಬಂದಾಗ ಅವರ ಪಾಲು ಕಡಿಮೆ. ಮಹಿಳೆಯರು ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷೆ ಡಾ.ರಾಜನಂದಿನಿ ಕಾಗೋಡು ಹೇಳಿದರು.
    ಸಾಗರದ ಎಲ್‌ಬಿ ಮತ್ತು ಎಸ್‌ಬಿಎಸ್ ಕಾಲೇಜಿನಲ್ಲಿ ರೋಟರಿ ಸಂಸ್ಥೆ, ರೆಡ್‌ಕ್ರಾಸ್, ಜ್ಞಾನಸಾಗರ ಇನ್ಸಿ÷್ಟಟ್ಯೂಟ್ ಆಫ್ ಸಾಗರ ಪ್ಯಾರಾ ಮೆಡಿಕಲ್ ಸೈನ್ಸ್, ಮಲೆನಾಡು ಔಷಧ ವ್ಯಾಪಾರಿಗಳ ಸಂಘ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ, ಡಾ.ಜಿ.ಎ.ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ಹಿಮೋಗ್ಲೋಬಿನ್ ತಪಾಸಣಾ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    ವಿದ್ಯಾರ್ಥಿನಿಯರು ಆಗಾಗ್ಗೆ ರಕ್ತ ತಪಾಸಣೆ ಮಾಡಿಸಿಕೊಳ್ಳಬೇಕು. ರಕ್ತದಲ್ಲಿ ಕಬ್ಬಿಣಾಂಶ ಕೊರತೆಯಿಂದ ಹಲವು ಕಾಯಿಲೆಗಳಿಗೆ ಕಾರಣವಾಗುತ್ತದೆ. ನುಗ್ಗೆ ಸೊಪ್ಪು, ಕಡಲೆಬೀಜ ಮುಂತಾದವುಗಳ ಬಳಕೆಯನ್ನು ಹೆಚ್ಚು ಮಾಡಬೇಕು. ದೇಹದಲ್ಲಿ ರಕ್ತದ ಚಲನೆ ಸುಗಮವಾಗಿದ್ದರೆ ಮನುಷ್ಯ ಆರೋಗ್ಯವಾಗಿರುತ್ತಾನೆ ಎಂದರು.
    ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಎಂ.ಹರನಾಥರಾವ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ರಕ್ತನಿಽ ಕೇಂದ್ರದ ಡಾ.ಎಚ್.ಎಂ.ಶಿವಕುಮಾರ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಭಾಪತಿ ಕೆ.ಎನ್.ಶ್ರೀಧರ್, ಕೆ.ವೆಂಕಟೇಶ್ ಕವಲಕೋಡು, ಬಿ.ಎನ್.ರಾಜೀವ್, ಡಾ.ಶಿಲ್ಪಾ ನಟೇಶ್, ಚೈತ್ರಾ ಶಶಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts