More

    ಸಂಜೀವಿನಿ ಒಕ್ಕೂಟದಲ್ಲಿ ತೊಡಗಿಸಿಕೊಳ್ಳಿ

    ಎನ್.ಆರ್.ಪುರ: ಎನ್‌ಆರ್‌ಎಲ್‌ಎಂ ಸಂಜೀವಿನಿ ಒಕ್ಕೂಟದ ಮೂಲಕ ಮಹಿಳೆಯರು ಜೀವನೋಪಾಯ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಕಾರ್ಯಕ್ರಮದ ಜಿಲ್ಲಾ ವ್ಯವಸ್ಥಾಪಕ ರಾಜೇಂದ್ರಕುಮಾರ್ ತಿಳಿಸಿದರು.

    ನಾಗಲಾಪುರದಲ್ಲಿ ಸಂಜೀವಿನಿ ಗ್ರಾಪಂ ಮಟ್ಟದ ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟದ ವಾರ್ಷಿಕೋತ್ಸವ ಸಮಾರೋಪದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ 220 ಸಂಜೀವಿನಿ ಸ್ವಸಹಾಯ ಸಂಘಗಳಿವೆ. ಇದುವರೆಗೆ ತಾಲೂಕಿನಲ್ಲಿ ಮಾತ್ರ ಎರಡು ಒಕ್ಕೂಟಗಳ ವಾರ್ಷಿಕೋತ್ಸವ ನಡೆದಿದೆ. ಮೂರು ವರ್ಷದ ಹಿಂದೆ ಸಂಜೀವಿನಿ ಸ್ವಸಹಾಯ ಸಂಘಗಳು ಪ್ರಾರಂಭವಾಗಿವೆ. ಇದುವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 150ಕ್ಕೂ ಹೆಚ್ಚು ಕಾರ್ಯಕ್ರಮ ನಡೆಸಿದ್ದೇವೆ ಎಂದರು.
    ಪ್ರಾರಂಭದಲ್ಲಿ ಉಳಿತಾಯಕ್ಕೆ ಸೀಮಿತವಾಗಿದ್ದ ಸ್ವಸಹಾಯ ಒಕ್ಕೂಟಗಳು ಈಗ ಉದ್ಯಮ ಸ್ಥಾಪಿಸಿ ಆರ್ಥಿಕ ಚಟುವಟಿಕೆಗಳಲ್ಲೂ ಭಾಗಿಯಾಗಿವೆ. ಸಂಜೀವಿನಿ ಒಕ್ಕೂಟದಿಂದ 65 ಬಾರಿ ತರಬೇತಿ ನೀಡಿದ್ದೇವೆ. ಈ ಹಿಂದೆ ಜಿಲ್ಲಾ ಕೇಂದ್ರದಲ್ಲಿ ತರಬೇತಿ ನಡೆಯುತ್ತಿತ್ತು. ಈಗ ತಾಲೂಕು ಕೇಂದ್ರದಲ್ಲೇ ತರಬೇತಿ ನೀಡಲಾಗುತ್ತಿದೆ. ಪ್ರಸ್ತುತ 15 ಲಕ್ಷ ರೂ. ಅನುದಾನವನ್ನು ನೇರವಾಗಿ ಸಂಜೀವಿನಿ ಒಕ್ಕೂಟದ ಖಾತೆಗೆ ಹಾಕಿದ್ದೇವೆ ಎಂದು ಮಾಹಿತಿ ನೀಡಿದರು.
    ತಾಪಂ ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ್ ಮಾತನಾಡಿ, ಮಹಿಳೆಯರು ಹಣವನ್ನು ಮನೆಯಲ್ಲಿ ಡಬ್ಬಿಗೆ ಹಾಕಿ ಉಳಿತಾಯ ಮಾಡುತ್ತಿದ್ದರು. ಇದೇ ಕಲ್ಪನೆಯಲ್ಲಿ ಸ್ವಸಹಾಯ ಸಂಘದ ಮೂಲಕ ಮಹಿಳೆಯರು ಉಳಿತಾಯ ಮಾಡುತ್ತಿದ್ದಾರೆ. ಮಹಿಳೆಯರಿಗೆ ಆರ್ಥಿಕ, ಸಾಮಾಜಿಕ ಚಟುವಟಿಕೆ ನಡೆಸಲು ಅವಕಾಶಗಳು ಕಡಿಮೆಯಿದ್ದು, ಇಂಥ ಸ್ವಸಹಾಯ ಸಂಘಗಳ ಮೂಲಕ ಮುಖ್ಯವಾಹಿನಿಗೆ ಬರಲು ಅವಕಾಶ ಕಲ್ಪಿಸಲಾಗಿದೆ. ಕಡೂರು ಸಂಜೀವಿನಿ ಒಕ್ಕೂಟಕ್ಕೆ ವಾಹನ ನೀಡಲಾಗಿದೆ ಎಂದು ತಿಳಿಸಿದರು.
    ಎನ್‌ಆರ್‌ಎಲ್‌ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಎಂ.ಸುಬ್ರಹ್ಮಣ್ಯ ಮಾತನಾಡಿ, ತಾಲೂಕಿನಲ್ಲಿ 14 ಸಂಜೀವಿನಿ ಒಕ್ಕೂಟ ರಚನೆಯಾಗಿದೆ. ಸರ್ಕಾರಿ ಕಾರ್ಯಕ್ರಮಗಳನ್ನು ಒಕ್ಕೂಟದ ಮೂಲಕ ಅನುಷ್ಠಾನ ಮಾಡಲಾಗುತ್ತಿದೆ. 14 ಸ್ವಸಹಾಯ ಸಂಘದ ಸದಸ್ಯರಿಗೆ ವಾಹನ ಚಾಲನೆ ತರಬೇತಿ ನೀಡಲಾಗಿದೆ. ಘನ ತ್ಯಾಜ್ಯ ವಿಲೇವಾರಿ ವಾಹನಗಳನ್ನು ತರಬೇತಿ ಪಡೆದ ಮಹಿಳೆಯರೇ ಚಾಲನೆ ಮಾಡಲಿದ್ದಾರೆ ಎಂದರು.
    ನಾಗಲಾಪುರ ಸಂಜೀವಿನಿ ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಕಮಲಾ ಸುಧೀರ್, ಗ್ರಾಪಂ ಅಧ್ಯಕ್ಷೆ ರೀನಾಬೆನ್ನಿ, ಸಾಹಿತಿ ಜಯಮ್ಮ, ಗ್ರಾಪಂ ಸದಸ್ಯರಾದ ಸುಮಿತ್ರಾ, ಶೋಭಾ, ಕಲಾವಿದ ಅಭಿನವ ಗಿರಿರಾಜ್, ಪಿಡಿಒ ಪ್ರೇಮಕುಮಾರ್, ಚೈತ್ರಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts