More

    ಸಂಘಟಿತರಾಗಿ ಸರ್ಕಾರದ ಸೌಲಭ್ಯ ಪಡೆಯಿರಿ


    ಚಾಮರಾಜನಗರ ಪ್ರತಿಯೊಬ್ಬರೂ ಸಂಘಟಿತರಾಗುವ ಮೂಲಕ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಗುಂಡಾಲ್ ಸರ್ಕಲ್ ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ಕೇತೇಗೌಡ ತಿಳಿಸಿದರು.

    ಹನೂರು ತಾಲೂಕಿನ ಪುಟ್ಟಿರಮ್ಮನ ದೊಡ್ಡಿಯಲ್ಲಿ ಸೋಮವಾರ ತಾಲೂಕು ಸೋಲಿಗ ಅಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ಧ ಸೋಲಿಗ ಮುಖಂಡರ ಸಭೆಯಲ್ಲಿ ಮಾತನಾಡಿದರು.


    ತಾಲೂಕಿನಲ್ಲಿ 80ಕ್ಕೂ ಹೆಚ್ಚು ಹಾಡಿಗಳಲ್ಲಿ ಸೋಲಿಗರು ವಾಸಿಸುತ್ತಿದ್ದಾರೆ. ಆದರೆ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರು, ಸಮರ್ಪಕ ರಸ್ತೆ, ವಿದ್ಯುತ್ ಸೇರಿದಂತೆ ಹಲವು ಅಗತ್ಯ ಮೂಲ ಸೌಕರ್ಯಗಳ ಕೊರತೆ ಇದೆ.

    ಇನ್ನು ಅರಣ್ಯ ಹಕ್ಕು ಕಾಯ್ದೆಯಡಿ ನೀಡಿರುವ ಭೂಮಿಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆ ಇದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ. ಇದರಿಂದ ಕಷ್ಟದ ನಡುವೆ ಜೀವನ ಸಾಗಿಸುತ್ತಿದ್ದು, ತುಂಬಾ ತೊಂದರೆ ಅನುಭವಿಸುತ್ತಿದ್ದೇವೆ.

    ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಸಂಘಟಿತರಾಗಬೇಕು. ಇದರಿಂದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯ. ಹಾಗೆಯೇ ಸಂಘದ ಬಲವರ್ಧನೆಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.


    ಸಭೆಯಲ್ಲಿ ಸೋಲಿಗ ಸಮನ್ವಯ ಮಂಚ್ ಭಾರತ್ ರಾಷ್ಟ್ರೀಯ ಅಧ್ಯಕ್ಷ ವಿ.ಮುತ್ತಯ್ಯ, ಜಿಲ್ಲಾ ಸೋಲಿಗ ಅಭಿವೃದ್ಧಿ ಸಂಘದ ಉಪಾಧ್ಯಕ್ಷ ರಂಗೇಗೌಡ, ತಾಲೂಕು ಕಾರ್ಯದರ್ಶಿ ಎಂ. ರಂಗೇಗೌಡ, ಸಂಯೋಜಕ ಮಹದೇವಸ್ವಾಮಿ, ಮುಖಂಡರಾದ ರಾಜಪ್ಪ, ಮಾದೇವ, ಶಿವಣ್ಣ, ನಂದೀಶ, ಬಿಳಿಗಿರಿಗೌಡ, ಮುತ್ತ, ಮಹದೇವಮ್ಮ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts